ಮುಂಬೈ,ನ,2019(www.justkanna.in): ರಾಷ್ಟ್ರಪತಿ ಆಡಳಿತ ಹೇರುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ ಮಹಾರಾಷ್ಟ್ರ ರಾಜ್ಯಪಾಲ ಕ್ರಮ ಪ್ರಶ್ನಿಸಿ ಶಿವಸೇನೆ ಸುಪ್ರೀಂಕೋರ್ಟ್ ಮೊರೆ ಹೋಗಿದೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಆತಂತ್ರವಾದ ನಂತರ ಯಾವುದೇ ಪಕ್ಷಗಳು ಸರ್ಕಾರ ರಚಿಸಲು ವಿಫಲವಾದ ಕಾರಣ ರಾಷ್ಟ್ರಪತಿ ಆಳ್ವಿಕೆ ಹೇರಲು ಮಹಾರಾಷ್ಟ್ರ ರಾಜ್ಯಪಾಲರಾದ ಭಗತ್ ಸಿಂಗ್ ಕೊಶ್ಯಾರಿ ಅವರು ಕೇಂದ್ರಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ. ರಾಷ್ಟ್ರಪತಿ ಆಳ್ವಿಕೆ ಹೇರಲು ಶಿಫಾರಸ್ಸು ಮಾಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಶಿವಸೇನೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಅಲ್ಲದೆ ತುರ್ತು ಅರ್ಜಿ ವಿಚಾರಣೆ ನಡೆಸುವಂತೆ ಕೋರ್ಟ್ ಮನವಿ ಮಾಡಿದೆ.
ಬಿಜೆಪಿ ಜತೆ ಮೈತ್ರಿ ಮುರಿದುಕೊಂಡ ನಂತರ ಎನ್ಸಿಪಿ ಹಾಗೂ ಕಾಂಗ್ರೆಸ್ ಬೆಂಬಲದೊಂದಿಗೆ ಸರ್ಕಾರ ರಚಿಸಲು ಮೂರು ದಿನ ಹೆಚ್ಚುವರಿ ಕಾಲಾವಕಾಶ ಕೊಡುವಂತೆ ರಾಜ್ಯಪಾಲರಲ್ಲಿ ಶಿವಸೇನೆ ಮನವಿ ಮಾಡಿತ್ತು. ಹೆಚ್ಚುವರಿ ಕಾಲಾವಕಾಶ ನಿರಾಕರಿಸಿದ ರಾಜ್ಯಪಾಲರು ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿದ್ದರು.
Key words: Shiv Sena -Supreme Court – governor’s -recommendation – President’s rule