ಕೊಪ್ಪಳ,ಏಪ್ರಿಲ್, 5,2025 (www.justkannada.in): ಪ್ರಧಾನಿ ನರೇಂದ್ರ ಮೋದಿ ಅವರು ಕಪ್ಪು ಹಣ ತರುವುದಾಗಿ ಹೇಳಿದ್ದರು ತಂದರಾ? ಎಲ್ಲರ ಖಾತೆ 15 ಲಕ್ಷ ಹಾಕುವುದಾಗಿಗಿ ಹೇಳಿದ್ದರು, ಆದರೆ ಹಾಕಿದ್ರಾ ? ಅವರು ಜನರಿಗೆ ಎಷ್ಟು ಮೋಸ ಮಾಡಬೇಕು ಅಷ್ಟು ಮಾಡಿದ್ದಾರೆ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದು ಸಚಿವ ಶಿವರಾಜ್ ತಂಗಡಗಿ ವಾಗ್ದಾಳಿ ನಡೆಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ನಾವು ಹೇಳಿದಂತೆ ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡಿದ್ದೇವೆ. ನಾವು ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಆದರೆ ಬಿಜೆಪಿಯವರು ಸುಳ್ಳು ಹೇಳುವುದರಲ್ಲೇ ಕಾಲ ಕಳೆದಿದ್ದಾರೆ ಎಂದರು.
ಸಂಪುಟ ವಿಸ್ತರಣೆ ವಿಚಾರ ಕುರಿತು ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ಅದನ್ನೆಲ್ಲ ನಮ್ಮ ಕೇಂದ್ರ ನಾಯಕರು ನೋಡಿಕೊಳ್ಳುತ್ತಾರೆ. ಕೆಪಿಸಿಸಿ ಅಧ್ಯಕ್ಷರ ವಿಷಯವಾಗಿ ಯಾರು ಮಾತನಾಡುವಂತಿಲ್ಲ. ನಮ್ಮ ಕೇಂದ್ರ ನಾಯಕರ ನಮಗೆ ಸೂಚನೆ ನೀಡಿದ್ದಾರೆ ಎಂದರು.
Key words: BJP, lying , Minister, Shivaraj Thangadagi