ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಚುನಾವಣೆ ಪ್ರಕ್ರಿಯೆ ಆರಂಭ- ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್

ಬೆಂಗಳೂರು,ಜನವರಿ,18,2025 (www.justkannada.in): ಪ್ರಸ್ತುತ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿವೈ ವಿಜಯೇಂದ್ರ ಕೆಳಗಿಳಿಸುವಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಣ ಪಟ್ಟು ಹಿಡಿದಿದ್ದು,  ಬಿಜೆಪಿ ನೂತನ ರಾಜ್ಯಾಧ್ಯಕ್ಷ ಆಯ್ಕೆಗೆ ಚುನಾವಣೆ ನಡೆಸುವ ಬಗ್ಗೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಶೀಘ್ರವೇ ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ಕುರಿತು ಚುನಾವಣೆ ಪ್ರಕ್ರಿಯೆ ಆರಂಭವಾಗಲಿದೆ. ಚುನಾವಣಾ ನಡೆಸಿ ರಾಜ್ಯ ಬಿಜೆಪಿ ಘಟಕ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ಬೂತ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೂ ಚುನಾವಣೆ ನಡೆಯಲಿದೆ ಎಂದಿದ್ದಾರೆ.

ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಯಾವುದೇ ರೀತಿಯಾದ ಗೊಂದಲ ಇಲ್ಲ. ಎಲ್ಲರೂ ಸೇರಿ ಚರ್ಚಿಸಿ ಬಿಜೆಪಿ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

Key words: Election,BJP state president, post,Union Minister, Shivraj Singh Chouhan