ನವದೆಹಲಿ,ಫೆಬ್ರವರಿ,19,2025 (www.justkannada.in): ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ತಲುಪುತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ತಲುಪುತ್ತಿಲ್ಲ. ಕಾಂಗ್ರೆಸ್ ನವರು ವಾಪಸ್ ತಿರುಗಿ ನೋಡಬೇಕು. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದಿದೆ. ಆದರೆ ಜನರಿಗೆ ಯೋಜನೆಗಳು ತಲುಪುತ್ತಿಲ್ಲ ಮಹಿಳೆಯರಿಗೆ ಉಚಿತ ಪ್ರಯಾಣ ಅಂತ ಹೇಳಿದ್ರು. ಆದರೆ ಬಸ್ ನಿಲ್ಲಿಸಿದ್ರು ಗೃಹಲಕ್ಷ್ಮೀ ಯೋಜನೆಯ 2ಸಾವಿರ ಹಣ ತಲುಪುತ್ತಿಲ್ಲ. ಸಿದ್ದರಾಮಯ್ಯ ಯೋಜನೆಗಳು ನಿಂತಿದೆಯಾ ಎಂದು ಕೇಳಿದ್ದಾರೆ. ಹಣಕಾಸು ಇಲಾಖೆ ಇಟ್ಟುಕೊಂಡು ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲ ಕರ್ನಾಟಕದಲ್ಲಿ ಪ್ರತಿನಿತ್ಯ ಒಂದಲ್ಲ ಒಂದರ ದರ ಏರಿಕೆಯಾಗುತ್ತಿದೆ ಎಂದು ಕಿಡಿಕಾರಿದರು.
ಮೆಟ್ರೋ ಟಿಕೆಟ್ ದರ ಏರಿಕೆ ಬಗ್ಗೆ ಸಿದ್ದರಾಮಯ್ಯ ಸುಳ್ಳು ಹೇಳಿದ್ದಾರೆ. ಕರ್ನಾಟಕ ಸರ್ಕಾರದ ಶಿಫಾರಸ್ಸಿನ ಮೇರೆಗೆ ಮೆಟ್ರೋ ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ. ಮೆಟ್ರೋ ಅಧಿಕಾರಿಗಳು ಟಿಕೆಟ್ ದರ ಹೆಚ್ಚಳಕ್ಕೆ ಪತ್ರ ಬರೆದಿದ್ದರು. ನಿಮ್ಮ ಒತ್ತಡಕ್ಕೆ ಒಳಗಾಗಿ ಕೇಂದ್ರ ಅನುಮತಿ ಕೊಟ್ಟಿದೆ ಎಂದು ಶೋಭಾ ಕರಂದ್ಲಾಜೆ ಅವರು ತಿಳಿಸಿದರು.
Key words: Guarantee schemes, not reaching, beneficiaries , Shobha Karandlaje