ಮಂಡ್ಯ,ಆಗಸ್ಟ್,16,2021(www.justkannada.in): ಕೇಂದ್ರ ಸಚಿವೆಯಾದ ಬಳಿಕ ಮೊದಲ ಬಾರಿಗೆ ಮಂಡ್ಯ ಜಿಲ್ಲೆಗೆ ಭೇಟಿ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಗದ್ದೆಗಿಳಿದು ನಾಟಿ ಮಾಡಿದ ದೃಶ್ಯ ಕಂಡು ಬಂತು.
ಜನಾಶೀರ್ವಾದ ಯಾತ್ರೆ ಹಿನ್ನೆಲೆ ಇಂದು ಮಂಡ್ಯ ಜಿಲ್ಲೆಗೆ ಆಗಮಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮೊದಲು ಜಿಲ್ಲೆಯ ಮದ್ದೂರು ತಾಲೂಕಿನ ರುದ್ರಾಕ್ಷಿಪುರ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪಡಿತರ ಪರಿಶೀಲನೆ ಮಾಡಿದರು. ನಂತರ ಹೊನಗನಹಳ್ಳಿ ಗ್ರಾಮದಲ್ಲಿ ಮಹಿಳೆಯರ ಜೊತೆ ಗದ್ಧೆಗಿಳಿದು ಭತ್ತದ ನಾಟಿ ಮಾಡಿದರು.
ಇನ್ನು ಇದೇ ವೇಳೆ ಸಚಿವ ನಾರಾಯಣಗೌಡ ನಾಟಿ ಯಂತ್ರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾಕರಂದ್ಲಾಜೆ ನಾಟಿಯಂತ್ರ ಚಾಲನೆ ಮಾಡಿದರು. ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿದ ಶೋಭಾ ಕರಂದ್ಲಾಜೆ, ರೈತ ಮಹಿಳೆಗೆ ದೇಶದ ಕೃಷಿ ಮಂತ್ರಿಯಾಗುವ ಅವಕಾಶ ಸಿಕ್ಕಿದೆ. ಅವಕಾಶ ಕೊಟ್ಟ ನರೇಂದ್ರ ಮೋದಿ ಅವರಿಗೆ ಧನ್ಯವಾದ ಎಂದು ತಿಳಿಸಿದರು.
Key words: Shobha Karandlaje- Union Minister – Women – Mandya-farming