SSLC ಪರೀಕ್ಷಾ ಶುಲ್ಕ ಹೆಚ್ಚಿಸಿ ಶಾಕ್ ನೀಡಿದ ಸರಕಾರ!

ಬೆಂಗಳೂರು, ಡಿಸೆಂಬರ್ 12, 2021 (www.justkannada.in): ಎಸ್‌ಎಸ್‌ಎಲ್ ಸಿ ಪರೀಕ್ಷಾ ಶುಲ್ಕವನ್ನು 100 ರೂ. ಹೆಚ್ಚಿಸಲಾಗಿದೆ. ಈ ಮೂಲಕ ಶುಲ್ಕ 485 ರೂ.ನಿಂದ 585 ರೂ.ಗೆ ಏರಿಕೆಯಾಗಿದೆ.

ಪುನರಾವರ್ತಿತಾ ಶಾಲಾ, ಖಾಸಗಿ ಅಭ್ಯರ್ಥಿಗಳು ಒಂದು ವಿಷಯಕ್ಕೆ ಕಟ್ಟಬೇಕಿದ್ದ ಶುಲ್ಕವನ್ನು 320 ರೂ.ನಿಂದ 370 ರೂ.ಕ್ಕೆ ಹೆಚ್ಚಳ ಮಾಡಲಾಗಿದೆ.

2 ವಿಷಯಕ್ಕೆ 386 ರೂ. ಪಾವತಿಸಬೇಕಿದ್ದ ವಿದ್ಯಾರ್ಥಿಗಳು 461 ರೂ.ಹಾಗೂ 3 ಮತ್ತು ಅದಕ್ಕಿಂತ ಹೆಚ್ಚಿನ ವಿಷಯಗಳಿಗೆ 520 ರೂ. ಬದಲಿಗೆ 620 ರೂ. ಪಾವತಿಸಬೇಕಿದೆ ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಈ ಮೂಲಕ ರಾಜ್ಯದ ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಬಿಗ್ ಶಾಕ್ ನೀಡಿದೆ.