ಬೆಂಗಳೂರು,ಡಿಸೆಂಬರ್,29,2022(www.justkannada.in): ಸಾರಿಗೆ ನೌಕರರು ಮುಂದಿನ 6 ತಿಂಗಳ ಕಾಲ ಮುಷ್ಕರ ನಡೆಸದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಈ ಮೂಲಕ ಸಾರಿಗೆ ನೌಕರರಿಗೆ ಸರ್ಕಾರ ಶಾಕ್ ನೀಡಿದೆ.
2023ರ ಜ.1ರಿಂದ 2023ರ ಜೂ.30ರವರೆಗೆ ನಿಗಮದಲ್ಲಿ ಮುಷ್ಕರ ನಿರ್ಬಂಧಿಸಿ ಅಧಿಸೂಚನೆ ಹೊರಡಿಸಿದ್ದು,. ಈ ಸಂಬಂಧ ಸರ್ಕಾರದ ಅಧಿಸೂಚನೆ ಪ್ರತಿಯನ್ನ ಎಲ್ಲ ಘಟಕ, ಕಾರ್ಯಗಾರ, ಕಚೇರಿ ಬಸ್ ನಿಲ್ದಾಣಗಳ ಸೂಚನ ಫಲಕಗಳಲ್ಲಿ ತಪ್ಪದೆ ಪ್ರಕಟಿಸುವಂತೆ ಸೂಚನೆ ನೀಡಿದೆ. ಅಲ್ಲದೇ ಕಾರ್ಮಿಕ ಸಂಘಟನೆಗಳಿಗೂ ಪ್ರತಿ ತಲುಪಿಸುವಂತೆ ಸರ್ಕಾರ ಸೂಚಿಸಿದೆ.
ಕರ್ನಾಟಕ ಆಗತ್ಯ ಸೇವಾ ನಿರ್ವಾಹಣೆ ಕಾಯ್ದೆ 2013 ರ ಅಡಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಇಂದು(ಡಿಸೆಂಬರ್ 29) ಆದೇಶ ಹೊರಡಿಸಿದೆ. ಇದರೊಂದಿಗೆ ಸರ್ಕಾರಕ್ಕೆ ಶಾಕ್ ನೀಡಲು ಮುಂದಾಗಿದ್ದ ಸಾರಿಗೆ ನೌಕರರಿಗೆ ಕೆಎಸ್ಆರ್ಟಿಸಿ ಮಾಸ್ಟರ್ ಸ್ಟ್ರೋಕ್ ಕೊಟ್ಟಿದೆ.
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಬೆಳಗಾವಿ ಸುವರ್ಣಸೌಧದ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಕರ್ನಾಟಕ ರಾಜ್ಯ ಸಾರಿಗೆ ನೌಕರರಿಗೆ ಸಮಾನ ವೇತನ ನೀಡುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಡಿ. 19ರಿಂದ ಬೆಳಗಾವಿಯಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುತ್ತಿದೆ.
Key words: Shock –transport- workers- government -ordered -no strike – 6 months