ಸಿದ್ದಗಂಗಾ ಮಠಕ್ಕೆ ನೀಡಿರುವ ವಿದ್ಯುತ್ ಬಿಲ್ ನೋಟಿಸ್ ವಾಪಸ್ ಪಡೆಯುತ್ತೇವೆ- ಸಚಿವ ಎಂ.ಬಿ ಪಾಟೀಲ್

ಬೆಳಗಾವಿ,ಡಿಸೆಂಬರ್,19,2024 (www.justkannada.in): ನೀರಾವರಿ ಯೋಜನೆಯ ವಿದ್ಯುತ್‌ ಬಿಲ್‌ 70 ಲಕ್ಷ ರೂಪಾಯಿ ಪಾವತಿಸಿ ಎಂದು ಸಿದ್ದಗಂಗಾ ಮಠಕ್ಕೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ)  ನೋಟಿಸ್ ನೀಡಿದ್ದು ಈ ಕುರಿತು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಸಿದ್ದಗಂಗಾ ಮಠಕ್ಕೆ ನೀಡಿರುವ ವಿದ್ಯುತ್ ಬಿಲ್ ನೋಟಿಸ್ ವಾಪಸ್ ಪಡೆಯುತ್ತೇವೆ. ಅಧಿಕಾರಿಗಳ ತಪ್ಪು ಕಂಡು ಬಂದರೆ ಅವರ ವಿರುದ್ದ ಕ್ರಮ ಕೈಗೊಳ್ಳಲಾಗುತ್ತದೆ.  ಈಗಾಗಲೇ  ನಾನು ಕೆಐಎಡಿಬಿ ಸಿಇಒಗೆ ಹೇಳಿದ್ದೇನೆ ಎಂದರು.

ಸಿದ್ಧಗಂಗಾ ಮಠದ ಬಗ್ಗೆ ನಮ್ಮೆಲ್ಲರಿಗೂ ಗೊತ್ತಿದೆ.  ‘ ನಾನು ಮಠದ ಸ್ವಾಮೀಜಿಯವರ ಜೊತೆಯೂ ಮಾತನಾಡುತ್ತೇನೆ.  ಸಿದ್ದಗಂಗಾ ಮಠಕ್ಕೆ ವಿದ್ಯುತ್ ಬಿಲ್ ನೋಟಿಸ್ ವಾಪಸ್ ಪಡೆಯುತ್ತೇವೆ ಎಂದು ಎಂ.ಬಿ ಪಾಟೀಲ್ ತಿಳಿಸಿದರು.

Key words: electricity bill, notice, Siddaganga Mutt, Minister, M.B. Patil