ತುಮಕೂರು,ಜನವರಿ,2,2025 (www.justkannada.in): ಸಿದ್ದಗಂಗಾ ಮಠದ ಹಳೆ ವಿದ್ಯಾರ್ಥಿಗಳು ಮತ್ತು ಹಿತೈಷಿಗಳ ಸಂಘದ ವತಿಯಿಂದ ಕೊಡಮಾಡುವ 2024ನೇ ಸಿದ್ದಗಂಗಾ ಶ್ರೀ ಪ್ರಶಸ್ತಿಗೆ ಹಿರಿಯ ವಿದ್ವಾಂಸ ಗೊ.ರು ಚನ್ನಬಸಪ್ಪ ಅವರು ಆಯ್ಕೆಯಾಗಿದ್ದಾರೆ.
ಜನವರಿ 21ರಂದು ಶ್ರೀ ಶಿವ ಕುಮಾರಸ್ವಾಮೀಜಿ ಅವರ 6ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮ ಇರಲಿದ್ದು ಅಂದು ಗೊ.ರು ಚನ್ನಬಸಪ್ಪ ಅವರಿಗೆ ಸಿದ್ಧಗಂಗಾ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
1ಲಕ್ಷ ನಗದು ಅಭಿನಂದನಾ ಪತ್ರ ಸ್ಮರಣಿಕೆ ನೀಡಿ ಗೊ.ರು ಚನ್ನಬಸಪ್ಪ ಅವರನ್ನು ಗೌರವಿಸಲಾಗುತ್ತದೆ. ಗೊ.ರು ಚನ್ನಬಸಪ್ಪ ಅವರು ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
Key words: Siddaganga Sri Award , Go ru. Channabasappa