ಚಿತ್ರದುರ್ಗ,ಫೆಬ್ರವರಿ,15,2023(www.justkannada.in): ಸರ್ಕಾರದ ವಿರುದ್ಧದ ಟೆಂಡರ್ ಗೋಲ್ಮಾಲ್ ಆರೋಪಕ್ಕೆ ತಿರುಗೇಟು ನೀಡಿ ಕಾಂಗ್ರೆಸ್ ನವರು ಜೈಲಿಗೆ ಹೋಗೋದನ್ನ ತಪ್ಪಿಸಿಕೊಳ್ಳಲಿ ಎಂದು ಹೇಳಿಕೆ ನೀಡಿದ್ದ ಸಿಎಂ ಬಸವರಾಜ ಬೊಮ್ಮಾಯಿಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸವಾಲು ಹಾಕಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಸಿದ್ಧರಾಮಯ್ಯ, ಕಾಂಗ್ರೆಸ್ ಅವಧಿಯಲ್ಲಿ ಭ್ರಷ್ಟಾಚಾರ ಆಗಿದೆ ಎಂದು ಆರೋಪಿಸಿದ್ದಾರೆ. ಈ ಬಿಜೆಪಿ ಸರ್ಕಾರ ಬಂದು ಮೂವರೆ ವರ್ಷ ಆಗಿದೆ. ನಮ್ಮ ಆಡಳಿತದಲ್ಲಿ ಭ್ರಷ್ಟಾಚಾರ ಆಗಿದ್ರೆ ತನಿಖೆ ಮಾಡಿಸಬೇಕಿತ್ತು. ಆಗ ಬಿಜೆಪಿಯವರ ಬಾಯಲ್ಲಿ ಕಡುಬು ಸಿಕ್ಕಿ ಹಾಕಿಕೊಂಡಿತ್ತಾ..? ಎಂದು ಕಿಡಿಕಾರಿದರು.
ಕಾಂಗ್ರೆಸ್ ಬಿಜೆಪಿ ಎರಡು ಅವಧಿಯ ಕಾರ್ಯಕ್ರಮಗಳ ಬಗ್ಗೆ ತನಿಖೆ ನಡೆಸಲಿ. ಧಮ್ ಇದ್ರೆ ಸಿಎಂ ಬಸವರಾಜ ಬೊಮ್ಮಾಯಿ ತನಿಖೆ ಮಾಡಿಸಲಿ ಎಂದು ಸಿದ್ಧರಾಮಯ್ಯ ಸವಾಲು ಹಾಕಿದರು.
ಟೆಂಡರ್ ಅಕ್ರಮ ಕುರಿತು ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ಹಣ ನೀಡಿದವರಿಗೆ ಮಾತ್ರ ಬಿಲ್ ಮಂಜೂರು ಮಾಡಲಾಗುತ್ತಿದೆ. ಗುತ್ತಿಗೆದಾರರಿಗೆ 20 ಸಾವಿರ ಕೋಟಿ ರೂ. ಬಿಲ್ ಬಾಕಿ ಉಳಿಸಿಕೊಂಡಿದ್ದಾರೆ. 100 ರೂ. ಇರುವ ಬಿಲ್ ಗೆ 200 ರೂ ಮಾಡಿದ್ದಾರೆ. ಈ ಮೂಲಕ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಕೂಡಲೇ ಸರ್ಕಾರ ಎಲ್ಲಾ ಟೆಂಡರ್ ಗಳನ್ನ ರದ್ಧು ಮಾಡಬೇಕು ಎಂದು ಆಗ್ರಹಿಸಿದರು.
Key words: Siddaramaiah –challenges- CM Bommai –tender-golmal