ಮೈಸೂರು,ಮೇ,19,2023(www.justkannada.in): ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರು ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅಭಿಮಾನಿ ಬಳಗ ಹಾಗೂ ಕೃಷ್ಣರಾಜ ಯುವ ಬಳಗದ ವತಿಯಿಂದ ಗನ್ ಹೌಸ್ ನಲ್ಲಿರುವ ಇಂದಿರಾ ಕ್ಯಾಂಟೀನ್ ನಲ್ಲಿ 100ಕ್ಕೂ ಹೆಚ್ಚು ಸಾರ್ವಜನಿಕರಿಗೆ ಹೋಳಿಗೆ ಊಟವನ್ನು ಉಚಿತವಾಗಿ ನೀಡುವ ಮೂಲಕ ಸಂಭ್ರಮಿಸಿದರು.
ಈ ಕುರಿತು ಮಾಧ್ಯಮಗಳಲ್ಲಿ ಮಾತನಾಡಿದ ಕೆಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದಕ್ಕೆ ತುಂಬಾ ಸಂತೋಷ ಆಗಿದೆ . ಇಬ್ಬರೂ ಪ್ರಭಾವಿ ಅನುಭವಿ ಹಾಗೂ ದಕ್ಷ ಆಡಳಿತಗಾರರು ಇವರ ನೇತೃತ್ವದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಲಿದೆ. ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಲಭಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅದನ್ನು ಮನಗೊಂಡು ಕಾಂಗ್ರೆಸ್ ಪಕ್ಷದ ವರಿಷ್ಠರು ಈಗ ಹಿರಿಯ ನಾಯಕರು ಮುಖ್ಯಮಂತ್ರಿ ಸ್ಥಾನ ನೀಡಿರುವುದು ನಮ್ಮೆಲ್ಲರಿಗೂ ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ವರ್ಗದ ಜನಾಂಗದವರಿಗೂ ಏಳಿಗೆಗಾಗಿ ಹಗಲಿರಲು ಶ್ರಮವಹಿಸುತ್ತಾರೆ, ಅವರು ಕೊಟ್ಟಂತ ಗ್ಯಾರಂಟಿಗಳನ್ನು ಈಡೇರಿಸುವುದರ ಜೊತೆಗೆ ಸರ್ವ ಜನಾಂಗದ ಅಭಿವೃದ್ಧಿಯನ್ನು ಬಯಸುವಂತಹ ಮಹಾನ್ ನಾಯಕರು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಲ ತುಂಬಿದ ಜೊತೆಗೆ ಜಿಲ್ಲಾ ಪಂಚಾಯತ್ ,ತಾಲೂಕು ಪಂಚಾಯತ್, ಹಾಗೂ ನಗರಪಾಲಿಕೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡುವುದೇ ಅವರ ಗುರಿಯಾಗಿದೆ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಬೇಕೆಂಬುದು ಎಲ್ಲಾ ಜಾತಿ ಜನಾಂಗದವರ ಬೇಡಿಕೆಯಾಗಿತ್ತು. ಮುಂದಿನ ದಿನಗಳಲ್ಲಿ ಕೂಡ ನಾವೆಲ್ಲರೂ ಅವರ ಜೊತೆಗೆ ಇರುತ್ತೇವೆ. ವಿಶೇಷವಾಗಿ ಮೈಸೂರು ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಎಸ್ ಎನ್ ರಾಜೇಶ್, ಮಂಜುನಾಥ್, ವಿಜಯ್ ಕುಮಾರ್, ಶಿವು, ರವಿಚಂದ್ರ, ಶಕ್ತಿಪ್ರಸಾದ್ ,ತೀರ್ಥ ಕುಮಾರ್, ಹಾಗೂ ಇನ್ನಿತರ ಅಭಿಮಾನಿಗಳು ಉಪಸ್ಥಿತರಿದ್ದರು.
Key words: Siddaramaiah- CM-Free -Holige -meal – public -ndira Canteen-mysore