ಶಿವಮೊಗ್ಗ, ಜನವರಿ,2,2021(www.justkannada.in): ಮಾಜಿ ಸಿಎಂ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಟೀಕಿಸಿದರು.
ಸಿಎಂ ಬಿಎಸ್ ವೈ ರಾಜೀನಾಮೆಗೆ ಆಗ್ರಹಿಸಿದ ಸಿದ್ಧರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ವಿರುದ್ದ ಶಿವಮೊಗ್ಗದಲ್ಲಿ ಇಂದು ಕಿಡಿಕಾರಿದ ನಳೀನ್ ಕುಮಾರ್ ಕಟೀಲ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು, ಬಿಜೆಪಿ ವಿರುದ್ದ ಮಾತನಾಡುತ್ತಿದ್ದಾರೆ. ಇವರು ಮಾನಸಿಕ ಅಸ್ವಸ್ಥತೆಯನ್ನು ಕಳೆದುಕೊಂಡಿದ್ದಾರೆ.ಗ್ರಾ.ಪಂ. ಚುನಾವಣೆಯ ಸೋಲು ಕಾಂಗ್ರೆಸ್ ನಾಯಕರನ್ನು ಹತಾಶೆಗೆ ತಳ್ಳಿದೆ ಎಂದರು.
ಬಿಜೆಪಿಯ ಕಾರ್ಯಕಾರಿಣಿಯ ಸಭೆಯಲ್ಲಿ ಲವ್ ಜಿಹಾದ್, ಗೋಹತ್ಯೆ ನಿಷೇಧಕ್ಕೆ ಸಂಬಂಧಿಸಿದಂತೆ ಚರ್ಚಿಸಲಾಗುವುದು ಮತ್ತು ಕಾರ್ಯಕಾರಿಣಿ ಸಭೆಯಲ್ಲಿ ಬರಬಹುದಾದ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.
ಈ ಬಾರಿಯ ಗ್ರಾ.ಪಂ. ಚುನಾವಣೆಯಲ್ಲಿ ನಾವು ಅಭೂತಪೂರ್ವ ಯಶಸ್ಸು ಪಡೆದಿದ್ದೇವೆ ಸುಮಾರು 62 ಸಾವಿರ ಬಿಜೆಪಿ ಕಾರ್ಯಕರ್ತರು ಸ್ವತಂತ್ರ ಅಭ್ಯರ್ಥಿಗಳಾಗಿ ವಿಜಯಶಾಲಿಗಳಾಗಿದ್ದಾರೆ. ಇದು ನಮ್ಮ ಸಂಘಟನೆಗೆ ಮತ್ತಷ್ಟು ಬಲ ತಂದಿದೆ ಎಂದರು.
Key words: Siddaramaiah- DK Sivakumar – lost – mental state-state- bjp-president Naleen Kumar Kateel