ಮೈಸೂರು,ಡಿಸೆಂಬರ್,26,2024 (www.justkannada.in): ಮೈಸೂರಿನ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ಇಡುವ ವಿಚಾರವಾಗಿ ಜಟಾಪಟಿ ನಡೆಯುತ್ತಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಹರೀಶ್ ಗೌಡ, ನೂರಕ್ಕೆ ನೂರು ಕೆಆರ್ ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರನ್ನು ಇಡುತ್ತೇವೆ ಎಂದು ಹೇಳಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಶಾಸಕ ಹರೀಶ್ ಗೌಡ, ಸಿದ್ದರಾಮಯ್ಯ ಆರೋಗ್ಯ ಮಾರ್ಗ ಅಂತಾ ಹೆಸರು ಪ್ರಸ್ತಾಪಿಸಿದ್ದೆ ನಾನು. ಸಿದ್ದರಾಮಯ್ಯ ಆರೋಗ್ಯ ಮಾರ್ಗ ವಿರೋಧ ಮಾಡ್ತ ಇರುವವರು ಹೊಟ್ಟೆ ಕಿಚ್ಚಿನಿಂದ ವಿರೋಧ ಮಾಡುತ್ತಿದ್ದಾರೆ. ಮಹಾರಾಜರ ನಂತರ ಮೈಸೂರಿಗೆ ಅತಿ ಹೆಚ್ಚು ಕೊಡುಗೆ ಕೊಟ್ಟವರು ಸಿದ್ದರಾಮಯ್ಯ. ಶಾಲಾ ಕಾಲೇಜು ನಿರ್ಮಾಣ, ಆಸ್ಪತ್ರೆಗಳ ನಿರ್ಮಾಣ ವಿಚಾರದಲ್ಲಿ ಸಿದ್ದರಾಮಯ್ಯ ಕೊಡುಗೆ ಬಹಳ ದೊಡ್ಡದು ಎಂದರು.
ಪ್ರತಾಪ್ ಸಿಂಹ ಹೇಳಿದ್ದು ಖುಷಿಯಾಯಾಯಿತು. ಅವರು ಚೆನ್ನಾಗಿ ಸಿದ್ದರಾಮಯ್ಯ ಅವರ ಸಾಧನೆ ವಿವರಿಸಿದ್ದಾರೆ. ಮನಸ್ಸು ಶುದ್ದಿ ಇಲ್ಲದವರು ಮಾತ್ರ ಸಿದ್ದರಾಮಯ್ಯ ಹೆಸರು ವಿರೋಧಿಸುತ್ತಾರೆ. ಮಹಾತ್ಮ ಗಾಂಧಿ ಮೇಲೂ ಆರೋಪ ಮಾಡುತ್ತಾರೆ. ನಾಥೂರಾಮ್ ಗೂಡ್ಸೆ ಗಾಂಧಿ ಹತ್ಯೆ ಮಾಡಿದ್ದು ತಪ್ಪಿಲ್ಲ ಎಂದು ಬಿಜೆಪಿ ಹೇಳುತ್ತಿದೆ. ಇದು ಬಿಜೆಪಿ ಲಕ್ಷಣ. ಸಿದ್ದರಾಮಯ್ಯ ಮೇಲೆ ಸುಮ್ಮನೆ ಆಪಾದನೆ ಮಾಡುತ್ತಿದ್ದಾರೆ. ನೂರಕ್ಕೆ ನೂರು ಸಿದ್ದರಾಮಯ್ಯ ಹೆಸರನ್ನು ಕೆಆರ್ ಎಸ್ ರಸ್ತೆಗೆ ಇಡ್ತಿವಿ. ಕಾನೂನಾತ್ಮಕವಾಗಿಯೆ ಹೆಸರು ಇಡುತ್ತೇವೆ ಎಂದರು.
Key words: KRS road, Siddaramaiah, MLA , Harish Gowda