ನವದೆಹಲಿ,ಸೆಪ್ಟಂಬರ್,26,2024 (www.justkannada.in): ಭ್ರಷ್ಟಾಚಾರದಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಎಲ್ಲಾ ತಯಾರಿ ಮಾಡಿಕೊಂಡಿದ್ದಾರೆ. ಹೀಗಾಗಿ ತಮಗೆ ಬೇಕಾದವರನ್ನು ಲೋಕಾಯುಕ್ತ ಎಡಿಜಿಪಿಯಾಗಿ ನೇಮಕ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯನವರೇ ನಿಮ್ಮ 70 ಲಕ್ಷ ರೂಪಾಯಿ ಮೌಲ್ಯದ ವಾಚ್ ಏನಾಯ್ತು? ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಏನಾಗಿದೆ? ನೀವೇ ಮಾಡಿದ ರೀಡೂ ವಿಷಯದಲ್ಲಿ ಕೆಂಪಣ್ಣ ವರದಿ ಏನಾಯಿತು? ಈಗ ಸಿಬಿಐ ಅಧಿಕಾರಿಗಳು ತನಿಖೆ ಮಾಡಲು ಬಾರದಂತೆ ಮಾಡಿದ್ದಾರೆ. ಲೋಕಾಯುಕ್ತ ತನಿಖೆ ಮಾಡಬೇಕು ಅಂದರೆ ಸಿಎಂ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದರು.
ಸಿದ್ದರಾಮಯ್ಯ ತಮ್ಮನ್ನ ಭ್ರಷ್ಟಾಚಾರದಿಂದ ರಕ್ಷಿಸಿಕೊಳ್ಳಲು ಎಲ್ಲಾ ತಯಾರಿ ಮಾಡಿಕೊಂಡಿದ್ದು ತಮಗೆ ಬೇಕಾದ ಲೋಕಾಯುಕ್ತ ಎಡಿಜಿಪಿ ನೇಮಿಸಿಕೊಂಡಿದ್ದಾರೆ. ಕ್ಯಾಬಿನೆಟ್ ಮೂಲಕ ಗವರ್ನರ್ ಗೆ ಉತ್ತರ ಕೊಡುವ ವಿಚಾರಕ್ಕೆ ಉತ್ತರಿಸಲಿ. ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಉತ್ತರ ಕೊಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.
Key words: Siddaramaiah, protect, corruption, Union Minister, Prahlad Joshi