ಬೆಂಗಳೂರು,ಸೆಪ್ಟಂಬರ್,26,2024 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ತನಿಖೆ ನಡೆಸಿ 3 ತಿಂಗಳೊಳಗೆ ವರದಿ ನೀಡುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಆದೇಶಿಸಿದ ಬೆನ್ನಲ್ಲೆ ಇದೀಗ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ ಕೇಳಿ ಬಂದಿದೆ.
ಸಿಎಂ ಸಿದ್ದರಾಮಯ್ಯ ವಿರುದ್ದ ತೀರ್ಪು ಬಂದ ಬೆನ್ನಲ್ಲೆ ಬಿಜೆಪಿ- ಜೆಡಿಎಸ್ ಪ್ರತಿಭಟನೆ ನಡೆಸುತ್ತಿದ್ದು ಈ ನಡುವೆ ಇದೀಗ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಸ್ವಪಕ್ಷದ ಹಿರಿಯ ನಾಯಕ ಕೆ.ಬಿ ಕೋಳಿವಾಡ ಆಗ್ರಹಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಮಾಜಿ ಸ್ಪೀಕರ್ ಕೋಳಿವಾಡ, ಪಕ್ಷದ ಹಿತದೃಷ್ಟಿಯಿಂದ ಸಿದ್ದರಾಮಯ್ಯ ರಾಜೀನಾಮೆ ನೀಡಲಿ. ನಿಷ್ಕಳಂಕವಾಗಿ ಹೊರಬಂದು ಬಳಿಕ ಮತ್ತೆ ಸಿಎಂ ಆಗಲಿ. ಎಷ್ಟೇ ಕಳಂಕ ರಹಿತವಾದರೂ ಪಕ್ಷದ ದೃಷ್ಠಿಯಿಂದ ರಾಜೀನಾಮೆ ನೀಡಲಿ ಎಂದಿದ್ದಾರೆ.
ಸಿದ್ಧರಾಮಯ್ಯ ಜೊತೆ 136 ಶಾಸಕರಿದ್ದಾರೆ. ಬೇರೆ ಬೇರೆ ರಾಜ್ಯಗಲ್ಲಿ ಚುನಾವಣೆ ನಡೆಯುತ್ತಿದೆ. ಅಲ್ಲಿ ಬಿಜೆಪಿಯವರು ಕಾಂಗ್ರೆಸ್ ಗೆ ಮುಜುಗರವನ್ನುಂಟು ಮಾಡುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಪಕ್ಷ ರಾಜೀನಾಮೆ ನೀಡಲಿ. ವಿಪಕ್ಷಗಳ ಕುತಂತ್ರದಿಂದ ಸಿಎಂ ವಿರುದ್ದ ಸುಳ್ಳು ಆರೋಪ ಮಾಡಲಾಗಿದೆ. ಕಪ್ಪು ಚುಕ್ಕೆ ಇಲ್ಲದಂತೆ ಆಡಳಿತ ನಡೆಸುತ್ತಿದ್ದಾರೆ. ಸಿಎಂ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್ ಮಾಡಲು ಬಿಜೆಪಿ ಕುತಂತ್ರ ಮಾಡುತ್ತಿದೆ. ಹೀಗಾಗಿ ಸಿದ್ದರಾಮಯ್ಯ ತನಿಖೆ ಎದುರಿಸಿ ನಿಷ್ಕಳಂಕವಾಗಿ ಬರಲಿ. ನಂತರ ಸಿಎಂ ಆಗಲಿ ಎಂದು ಕೆಬಿ ಕೋಳಿವಾಡ ತಿಳಿಸಿದ್ದಾರೆ.
Key words: Siddaramaiah, resign, Senior, Congress, leader