ಬೆಂಗಳೂರು,ಆಗಸ್ಟ್,3,2023(www.justkannada.in): ಸಿದ್ದರಾಮಯ್ಯ ಬಹಳ ವೀಕ್ ಆಗಿದ್ದಾರೆ. ಅವರು ಮೊದಲಿನ ರೀತಿ ಸಿಡಿದೇಳುತ್ತಿಲ್ಲ. ಸರ್ಕಾರದ ರಿಮೋಟ್ ಕಾಂಗ್ರೆಸ್ ಹೈಕಮಾಂಡ್ ಕೈಯಲ್ಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮೊದಲಿದ್ದ ಸಿದ್ದರಾಮಯ್ಯ ಬೇರೆ, ಈಗಿನ ಸಿದ್ದರಾಮಯ್ಯ ಬೇರೆ. ಸಿದ್ದರಾಮಯ್ಯ ವರಿಷ್ಠರ ಬಳಿ ತಲೆ ಬಾಗಿರುವುದು ಬಹಳ ವಿರಳ. ಸಿದ್ದರಾಮಯ್ಯ ನೇಚರ್ ಬೇರೆ, ಅವರು ಮೊದಲಿನ ತರ ಸಿಡಿದೇಳುತ್ತಿಲ್ಲ. ಇವಾಗ ವರಿಷ್ಠರು ಮಾತನ್ನು ಚಾಚು ತಪ್ಪದೇ ಪಾಲಿಸುತ್ತಿದ್ದಾರೆ. ಸರ್ಕಾರದಲ್ಲಿ ಹೈಕಮಾಂಡ್ನಿಂದಲೂ ಹಸ್ತಕ್ಷೇಪ ನಡೆಯುತ್ತಿದೆ. ನಿನ್ನೆಯ ಸಭೆಯಲ್ಲಿ ಕಪ್ಪ ಕಾಣಿಕೆ ಬಗ್ಗೆ ಚರ್ಚೆ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಹಿಡಿದು ಕಪ್ಪ ಕಾಣಿಕೆ ಹೈಕಮಾಂಡ್ ಗೆ ಕೊಡೋದು ಹೊಸದಲ್ಲ. ೀಗ ನಿನ್ನೆ ನಡೆದ ಸಭೆಯಲ್ಲೂ ಮುಂದುವರಿದಿದೆ ಎಂದು ಕುಟುಕಿದರು.
ಕಾಂಗ್ರೆಸ್ ಸಭೆ ಬಗ್ಗೆ ನಮ್ಮ ಅಭ್ಯಂತರ ಇಲ್ಲ. ಆದರೆ ಸಚಿವ ಸಂಪುಟವೇ ಹೋಗಿ ಸಭೆ ಮಾಡುವುದು ಸರಿಯಲ್ಲ. ರಾಜ್ಯದ ಜನರು ಸ್ಪಷ್ಟ ಬಹುಮತ ನೀಡಿ ಅಧಿಕಾರಕ್ಕೆ ತಂದಿದ್ದಾರೆ. ಕರ್ನಾಟಕದ ಜನರಿಗೆ ಇದು ಅವಮಾನ ಮಾಡಿದಂತಾಗುತ್ತದೆ. ರಾಜ್ಯ ಸರ್ಕಾರದಲ್ಲಿ ಯಾವುದೇ ಹೊಂದಾಣಿಕೆ ಇಲ್ಲ ಅನಿಸುತ್ತದೆ. ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲಿ ಹಗಲು ದರೋಡೆ ನಡೆಯುತ್ತಿದೆ ಎಂದು ಬಸವರಾಜ ಬೊಮ್ಮಾಯಿ ಗುಡುಗಿದರು.
Key words: Siddaramaiah – week- Government -remote – Congress high command-Bommai