ಬೆಂಗಳೂರು, ಜೂನ್ 26, 2021 (www.justkannada.in): ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 48,698 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.
ಕಳೆದ 24 ಗಂಟೆಯಲ್ಲಿ 1,183 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಸಾವನ್ನಪ್ಪಿದವರ ಸಂಖ್ಯೆ 3,94,493 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 64,818 ಕೊರೊನಾ ಸೋಂಕಿತರು ಚೇತರಿಸಿಕೊಂಡಿದ್ದು, ದೇಶದಲ್ಲಿ ಈವರೆಗೆ ಕೊರೊನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2,91,93,085 ಕ್ಕೆ ಏರಿಕೆಯಾಗಿದೆ.