ನವದೆಹಲಿ,ಫೆಬ್ರವರಿ,1,2023(www.justkannada.in): ನಿರ್ದಿಷ್ಟ ಸರ್ಕಾರಿ ಏಜೆನ್ಸಿಗಳ ಡಿಜಿಟಲ್ ವ್ಯವಸ್ಥೆಯಲ್ಲಿ ಗುರುತಿನ ದೃಢೀಕರಣಕ್ಕಾಗಿ ಪ್ಯಾನ್ (PAN)ಕಾರ್ಡ್ ಅನ್ನು ಸಾಮಾನ್ಯ ಗುರುತಿನ ಸಾಧನವಾಗಿ ಪರಿಗಣಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು.
ಇಂದು ಲೋಕಸಭೆಯಲ್ಲಿ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್, KYC ಸರಳೀಕರಣಕ್ಕೆ ಕೇಂದ್ರದ ಕ್ರಮ ಕೈಗೊಳ್ಳಲಾಗುತ್ತದೆ. ಸಾಮಾನ್ಯ ಗುರುತು ಚೀಟಿಯಾಗಿ ಪ್ಯಾನ್ ಕಾರ್ಡ್ ಬಳಕೆಗೆ ನಿರ್ಧಾರ ಮಾಡಲಾಗಿದೆ. ಈ ನಿರ್ಧಾರದೊಂದಿಗೆ, ವ್ಯಕ್ತಿಗಳ ಡಿಜಿಟಲ್ ಗುರುತು ದೃಢೀಕರಣದ ಸಮಸ್ಯೆಗೆ ಪರಿಹಾರ ದೊರೆಯಲಿದೆ. ಇದರಿಂದಾಗಿ ಆದಾಯ ತೆರಿಗೆ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಏಜೆನ್ಸಿಗಳಲ್ಲಿ ಕೆವೈಸಿ ಪ್ರಕ್ರಿಯೆ ಪ್ಯಾನ್ಕಾರ್ಡ್ ಹೊಂದಿರುವವರಿಗೆ ಸುಲಭವಾಗಲಿದೆ ಎಂದರು.
ಉದ್ಯಮಗಳು ಪ್ರತ್ಯೇಕ ಪ್ಯಾನ್ (PAN) ನಂಬರ್ ಹೊಂದಬೇಕು. ಈ ನಂಬರ್ ಆಧರಿಸಿ ಉದ್ಯಮಿಗಳ ಕುಂದುಕೊರತೆಯನ್ನು ಶೀಘ್ರ ಪರಿಹರಿಸಲಾಗುವುದು. ಇದಕ್ಕಾಗಿ ಹಲವು ನಿಯಮಗಳನ್ನು ಸಡಿಲಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.
ಈ ನಡುವೆ ಬಜೆಟ್ ನಲ್ಲಿ ಇ-ಕೋರ್ಟ್ ಗಳಿಗೆ 7 ಸಾವಿರ ಕೋಟಿ ರೂಪಾಯಿ ಅನುದಾನ. ಪ್ರಧಾನಿ ಅವಾಸ್ ಯೋಜನೆಗೆ 79 ಸಾವಿರ ಕೋಟಿ ರೂ. ಅನುದಾನ. ನಗರೋತ್ಥಾನಕ್ಕೆ 10 ಸಾವಿರ ಕೋಟಿ ರೂಪಾಯಿ ಮೀಸಲು. MSMEಗಳಿಗೆ ವಿವಾದ್ ಸೆ ವಿಶ್ವಾಸ್ ಯೋಜನೆ. 2047ರೊಳಗೆ ಮ್ಯಾನ್ ಹೋಲ್ ಮುಕ್ತ ಒಳಚರಂಡಿ ವ್ಯವಸ್ಥೆ ಗುರಿಯನ್ನ ಹೊಂದಿರುವುದು ಬುಡಕಟ್ಟು ಸಮುದಾಯದ ಸಮಗ್ರ ಅಭಿವೃದ್ಧಿಗೆ 15 ಸಾವಿರ ಕೋಟಿ ಮೀಸಲು. ಸರ್ಕಾರಿ ನೌಕರರಿಗಾಗಿ ಮಿಷನ್ ಕರ್ಮಯೋಗಿ ಯೋಜನೆ ಜಾರಿ ಮಾಡುವುದಾಗಿ ಘೋಷಣೆ ಮಾಡಿದರು.
Key words: simplify- KYC: Use – PAN card -common identity card.