ಬೆಂಗಳೂರು,ಸೆಪ್ಟಂಬರ್,28,2021(www.justkannada.in): ಅಕ್ಟೋಬರ್ 30ರಂದು ನಡೆಯಲಿರುವ ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಸಿದ್ಧವಾಗಿದೆ. ಉಪ ಚುನಾವಣೆ ನಮ್ಮ ಪಕ್ಷಕ್ಕೆ ಸಿದ್ಧತಾ ಪರೀಕ್ಷೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಕಟಿಸಿದರು.
ಎರಡೂ ಕ್ಷೇತ್ರಗಳ ಉಪ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ ಕೂಡಲೇ ಬಿಡದಿಯ ತಮ್ಮ ತೋಟದ ಮನೆಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ರಾಜ್ಯದಲ್ಲಿ ಎರಡು ಉಪ ಚುನಾವಣೆ ದಿನಾಂಕ ಅನೌನ್ಸ್ ಆಗಿದೆ. ಇದನ್ನು ನಮ್ಮ ಪಕ್ಷ ಸ್ವಾಗತಿಸುತ್ತದೆ. ಸಿಂದಗಿ ಹಾಗೂ ಹಾನಗಲ್ ನಲ್ಲಿ ಶಾಸಕರ ಅಕಾಲಿಕ ಮರಣ ಹೊಂದಿದ್ದರು. ಈ ಕಾರಣಕ್ಕಾಗಿ ಇದೀಗ ಚುನಾವಣೆ ದಿನಾಂಕ ಘೋಷಣೆ ಮಾಡಲಾಗಿದೆ. ಜೆಡಿಎಸ್ ಚುನಾವಣೆಗೆ ಸಿದ್ಧವಾಗಿದೆ ಎಂದು ತಿಳಿಸಿದರು.
ನಿನ್ನೆಯಿಂದ ವಿನೂತನ ಕಾರ್ಯಗಾರ ಮಾಡುತ್ತಿದ್ದೇವೆ. ಈ ಸಮಯದಲ್ಲಿಯೇ ಚುನಾವಣೆ ದಿನಾಂಕ ಘೋಷಣೆ ಮಾಡಿದ್ದಾರೆ. ಇದು ನಮ್ಮ ಪಕ್ಷಕ್ಕೆ ಮುಂದಿನ ವಿಧಾನಸಭೆ ಚುನಾವಣೆಗೆ ಸಿದ್ದತಾ ಪರೀಕ್ಷೆಯಂತೆ ಬಂದಿದೆ. ಈಗಾಗಲೇ ನಯಾಜ್ ಅವರನ್ನು ಹಾನಗಲ್ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದೇವೆ. ಅವರು ಸಕ್ರಿಯವಾಗಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹೆಚ್.ಡಿಕೆ ಹೇಳಿದರು.
ಸಿಂದಗಿ ಕ್ಷೇತ್ರದಲ್ಲಿ ಐವರು ಟಿಕೆಟ್ ಕೇಳುತ್ತಿದ್ದಾರೆ. ಈಗಾಗಲೇ ಚರ್ಚೆಗಳು ಕೂಡ ಮಾಡುತ್ತಿದ್ದೇವೆ. ಎರಡೂ ಕ್ಷೇತ್ರದಲ್ಲೂ ಅಭ್ಯರ್ಥಿಗಳನ್ನು ಹಾಕುತ್ತೇವೆ ಹಾಗೂ ಚುನಾವಣೆಗೆ ಸಾಮೂಹಿಕ ನಾಯಕತ್ವದಲ್ಲಿ ಹೋಗುತ್ತೇವೆ. ಇಂದಿನ ಸಭೆಯಲ್ಲಿ ಈ ಬಗ್ಗೆಯೂ ಚರ್ಚೆ ಮಾಡುತ್ತೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಹಾನಗಲ್ ಕ್ಷೇತ್ರದಲ್ಲಿ ನಯಾಜ್ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ. ಈ ಚುನಾವಣೆ ಗೆಲ್ಲಲು ಈ ಕಾರ್ಯಗಾರದಲ್ಲಿ ತರಬೇತಿ ನೀಡಲಾಗುತ್ತದೆ. ಎರಡೂ ಕಡೆ ನಮ್ಮ ಪಕ್ಷಕ್ಕೆ ಉತ್ತಮ ನೆಲೆ ಇದೆ. ಗೆಲುವಿಗಾಗಿ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಹೆಚ್.ಡಿ ಕುಮಾರಸ್ವಾಮಿ ನುಡಿದರು.
Key words: Sindagi-hanagal- constituencies-jds -former CM -HD Kumaraswamy
ENGLISH SUMMARY…
JDS to contest in Hangal, Sindhagi byelections: Former CM HDK announces
Bengaluru, September 28, 2021 (www.justkannada.in): “The JDS is all set to contest in the by-elections for Hangal and Sindhagi constituencies scheduled to be held on October 30,” said former Chief Minister H.D. Kumaraswamy. He said that it is in fact like a preparatory exam for his party.
The former Chief Minister addressed the media persons at his farmhouse located in Bidadi today as soon as the Central Election Commission announced the dates of the by-elections. “The date of the by-elections for two constituencies in the state is announced. The by-elections are held following the death of the Sindhagi and Hangal MLAs. The JDS is ready to contest. We are conducting a special workshop from yesterday. This by-election is like a preparatory exam for our party. We have already announced Nayaz as our candidate in Hangal constituency and he is working actively in the constituency,” he said.
“There are five ticket aspirants in Sindhagi constituency and we are already discussing it. We will contest in both constituencies. We will discuss it in today’s meeting,” he replied to a question.
Keywords: Byelection/ former Chief Minister H.D. Kumaraswamy/ Sindhagi/ Hangal/ JDS