ಚೆನ್ನೈ,ಸೆಪ್ಟಂಬರ್,25,2020(www.justkannada.in): ಅನಾರೋಗ್ಯಕ್ಕೆ ತುತ್ತಾಗಿ ಆಗಸ್ಟ್ 5ರಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ(74) ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಕನ್ನಡ ಚಿತ್ರರಂಗ ಸೇರಿದಂತೆ ಬಹುಭಾಷಾ ಗಾಯಕರಾಗಿ ಗುರುತಿಸಿಕೊಂಡಿದ್ದ ಬಾಲಸುಬ್ರಹ್ಮಣ್ಯಂ ಅವರು ಇಹಲೋಕ ತ್ಯೆಜಿಸಿದ್ದಾರೆ. ಈ ಬಗ್ಗೆ ಎಸ್ ಪಿಬಿ ಅವರ ಪುತ್ರ ಚರಣ್ ಮಾಹಿತಿ ನೀಡಿದ್ದಾರೆ. ನಮ್ಮ ತಂದೆ 1 ಗಂಟೆ 4 ನಿಮಿಷಕ್ಕೆ ನಿಧನರಾಗಿದ್ದಾರೆ. ಅವರಿಗಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳನ್ನ ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ.
ಎಸ್. ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಕೊರೋನಾ ಸೋಂಕು ತಗುಲಿ ಆಗಸ್ಟ್ 5 ರಂದು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.
ಎಸ್ ಪಿ ಬಾಲಸುಬ್ರಹ್ಮಣ್ಯಂ ಜೂನ್ 4, 1946ರಲ್ಲಿ ಜನಿಸಿದರು. ಭಾರತದ ಸುಪ್ರಸಿದ್ಧ ಹಿನ್ನೆಲೆ ಗಾಯಕರು. ದಕ್ಷಿಣ ಭಾರತದ ಕನ್ನಡ, ತಮಿಳು ಮತ್ತು ತೆಲುಗು ಚಿತ್ರರಂಗಗಳಲ್ಲಿ ಅವರದ್ದು ಅದ್ವಿತೀಯ ಸಾಧನೆ ಮಾಡಿದ್ದಾರೆ. 1966ರಲ್ಲಿ ಗಾಯಕರಾಗಿ ಚಿತ್ರರಂಗ ಪ್ರವೇಶ ಮಾಡಿದ್ದ ಇವರು ತೆಲುಗಿನ ಮರ್ಯಾದೆ ರಾಮಣ್ಣ ಚಿತ್ರಕ್ಕೆ ಹಿನ್ನೆಲೆ ಗಾಯಕರಾಗಿದ್ದರು. ಸುಮಾರು 40 ಸಾವಿರ ಹಾಡುಗಳಿಗೆ ಧ್ವನಿಯಾಗಿದ್ದ ಎಸ್ ಪಿಬಿ ಅವರಿಗೆ 6 ರಾಷ್ಟ್ರೀಯ ಚಿತ್ರ ಪ್ರಶಸ್ತಿಗಳು ದೊರೆತಿವೆ.
Key words: singer- SP Balasubramaniam -no more-chennai