ಬೆಂಗಳೂರು,ಡಿಸೆಂಬರ್,12,2020(www.justkannada.in): ಕೋವಿಡ್ ಸಂಕಷ್ಟದಲ್ಲಿ ನೌಕರರ ಬೇಡಿಕೆ ಈಡೇರಿಸುವುದು ಕಷ್ಟದ ಕೆಲಸ. ಮೊದಲು ಮುಷ್ಕರ ಬಿಟ್ಟು ಮಾತುಕತೆಗೆ ಬನ್ನಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸಾರಿಗೆ ನೌಕರರ ಮುಷ್ಕರ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸರ್ಕಾರ ಯಾವತ್ತೂ ನೌಕರರ ಕಷ್ಟದ ಜೊತೆಗೆ ಇದೆ. ಈ ಬಗ್ಗೆ ಸಿಎಂ ಗಂಭೀರವಾಗಿ ಪರಿಗಣಿಸಿದ್ದಾರೆ. ಅಲ್ಲದೆ ಸಾರಿಗೆ ಸಚಿವರು ಈ ವಿಚಾರದಲ್ಲಿ ನಿರ್ಲಕ್ಷ ತೋರಿಲ್ಲ. ಬೆಳಿಗ್ಗೆಯಿಂದಲೇ ನಿರಂತರವಾಗಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತಿದ್ದಾರೆ, ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದಾರೆ ಎಂದರು.
ಸಾರಿಗೆ ನೌಕರರ ವಿರುದ್ಧ ಎಸ್ಮಾ ಜಾರಿಯ ಪರಿಸ್ಥಿತಿ ಇನ್ನೂ ಬಂದಿಲ್ಲ, ಸಾರಿಗೆ ನೌಕರರು ಮುಷ್ಕರ ಬಿಟ್ಟು ಮಾತುಕತೆಗೆ ಬನ್ನಿ. ನೌಕರರರಿಗೂ ಜನರ ಕಷ್ಟ ಏನೆಂದು ಗೊತ್ತಾಗಿದೆ, ಒಂದೆರಡು ದಿನಗಳಲ್ಲಿ ಸಮಸ್ಯೆ ಬಗೆಹರಿಯುವ ವಿಶ್ವಾಸವಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
Key words: situation – enforcement – Esma –against- transport employees –not- Home Minister -Basavaraja Bommai.