ಮಂಡ್ಯ, ಡಿಸೆಂಬರ್ 10,2024 (www.justkannada.in): ಹಿರಿಯ ರಾಜಕಾರಣಿ ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಅಂತ್ಯಕ್ರಿಯೆ ನಾಳೆ ಅವರ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.
ನಾಳೆ ಸಂಜೆ 4 ಗಂಟೆಗೆ ಎಸ್ಎಂ ಕೃಷ್ಣ ಅವರಿಗೆ ಇಷ್ಟವಾದ ಕಾಫಿಡೇ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿದೇಶದಿಂದ ಸಂಬಂಧಿಕರು ಬರಬೇಕಿರುವ ಹಿನ್ನೆಲೆ ನಾಳೆ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.
ನಾಳೆ ಬೆಳಿಗ್ಗೆ 8 ಗಂಟೆವರೆಗೆ ಸದಾಶಿವನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ನಂತರ ಸದಾಶಿವ ನಗರದಿಂದ ಮದ್ದೂರಿಗೆ ಪಾರ್ಥೀವ ಶರೀರ ರವಾನೆ ಮಾಡಲಾಗುತ್ತದೆ. ಮಾರ್ಗಮಧ್ಯೆ 3 ಸ್ಥಳಗಳಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಕೆಂಗೇರಿ ರಾಮನಗರ ಚನ್ನಪಟ್ಟಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
Key words: Former CM, SM Krishna, Funeral, tomorrow