ಮೈಸೂರು, ಅಕ್ಟೋಬರ್,14,2024 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಪ್ರಕರಣ ದಾಖಲಾಗಿದ್ದು ಈ ಸಂಬಂಧ ಇಂದು ತನಿಖೆಗಾಗಿ ದೂರುದಾರ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತಕ್ಕೆ ಕೆಲ ದಾಖಲೆಗಳನ್ನ ಸಲ್ಲಿಸಿದ್ದಾರೆ.
ಇಂದು ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ಬಳಿಕ ಮಾತನಾಡಿದ ಸ್ನೇಹಮಯಿ ಕೃಷ್ಣ, ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸುವಂತೆ ಕೆಲ ದಾಖಲೆಗಳನ್ನು ಕೊಟ್ಟಿದ್ದೀನಿ. ಸಿಎಂ ಸಿದ್ದರಾಮಯ್ಯ ಹೈ ಕೋರ್ಟ್ ಗೆ ಸಲ್ಲಿಸಿರುವ ರಿಟ್ ಅರ್ಜಿಯ ಅಂಶಗಳನ್ನು ಉಲ್ಲೇಖ ಮಾಡಿ ಮಾಹಿತಿ ನೀಡಿದ್ದೇನೆ. ಸುಮಾರು 25 ಪುಟಗಳ ಮಾಹಿತಿ ಕೊಟ್ಟಿದ್ದೇನೆ. ಹೈಕೋರ್ಟ್ ನಲ್ಲಿ ಸಿಎಂ ಕೆಲ ಮಾಹಿತಿ ಕೊಡದೆ ಮುಚ್ಚಿಟ್ಟಿದ್ದಾರೆ. ಅವೆಲ್ಲ ಅಂಶಗಳನ್ನು ನಾನು ಹೇಳಿದ್ದೇನೆ. ವೈಟ್ನರ್ ಹಾಕಿರುವ ಪುಟವನ್ನು ಮಾಹಿತಿ ಬಗ್ಗೆ ಸಿಎಂ ಕೋರ್ಟ್ ಗೆ ಕೊಟ್ಟಿಲ್ಲ. ಈ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದರು.
ಅಲ್ಲದೆ ಪದೇ ಪದೇ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಲೋಕಾಯುಕ್ತಕ್ಕೆ ಬರುತ್ತಾರೆ. ಲೋಕಾಯುಕ್ತ ಮೇಲೆ ಪ್ರಭಾವ ಬಿರುತ್ತಿದ್ದಾರೆ ಅಂತ ಅನ್ನಿಸುತ್ತೆ. ಸಿಎಂ ಕೂಡ ಹೋದ ಕಡೆ ಪ್ರಚಾರಗಳಲ್ಲಿ ಪ್ರಚೋದನೆ ಹೇಳಿಕೆಗಳನ್ನು ಕೊಡ್ತಿದ್ದಾರೆ. ಇದರಿಂದ ನನಗೆ ನನ್ನ ಕುಟುಂಬಕ್ಕೆ ಭಯವಿದೆ. ಲೋಕಾಯುಕ್ತ ಕಚೇರಿಯಲ್ಲಿ ಸಿಸಿಟಿವಿ ಇಲ್ಲ. ಸುಪ್ರೀಂ ಕೋರ್ಟ್ ಸೂಚನೆಯಂತೆ. ಲೋಕಾಯುಕ್ತಕ್ಕೆ ಸಿಸಿ ಟಿವಿ ಅಳವಡಿಕೆ ಮಾಡಿ ಎಂದಿದ್ದೇನೆ. ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದರು.
Key words: Snehamai Krishna, documents, investigation, CM Siddaramaiah