ಬೆಂಗಳೂರು,ಫೆಬ್ರವರಿ,08,2021(www.justkannada.in) : ಉತ್ತರಾಖಂಡದಲ್ಲಿ ನೆನ್ನೆ ಸಂಭವಿಸಿದ ಭೀಕರ ಹಿಮನದಿ ಸ್ಫೋಟದ ಬಳಿಕ ಕಣ್ಮರೆಯಾದವರ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಈವರೆಗೆ 15 ಮಂದಿಯನ್ನು ರಕ್ಷಣೆ ಮಾಡಲಾಗಿದೆ. 14 ಮಂದಿಯ ಮೃತದೇಹ ಪತ್ತೆಯಾಗಿದೆ ಎಂದು ಚಮೋಲಿ ಪೊಲೀಸರು ತಿಳಿಸಿದ್ದಾರೆ.ಕರ್ಣಪ್ರಯಾಗ್ ಮಾರ್ಗದಿಂದ 7 ಹಾಗೂ ತಪೋವನ ಪ್ರದೇಶದಿಂದ 3 ಮೃತದೇಹಗಳನ್ನು ಪತ್ತೆಹಚ್ಚಲಾಗಿದೆ. ತಪೋವನದ ಸುರಂಗವೊಂದರಿಂದ 12 ಮಂದಿಯನ್ನು ರಕ್ಷಿಸಲಾಗಿದೆ ಎಂದು ಉತ್ತರಾಖಂಡ ಡಿಜಿಪಿ ಅಶೋಕ್ ಕುಮಾರ್ ಹೇಳಿದರು.ವಿಪತ್ತು ನಿರ್ವಹಣಾ ತಂಡಗಳನ್ನು ಒಳಗೊಂಡ ಎಂಐ-17 ಹಾಗೂ ಎಎಲ್ಎಚ್ ಹೆಲಿಕಾಪ್ಟರ್ಗಳನ್ನು ಡೆಹ್ರಾಡೂನ್ನಿಂದ ಜೋಶಿಮಠದತ್ತ ಕಳುಹಿಸಿಕೊಡಲಾಗಿದೆ. ವೈಮಾನಿಕ ರಕ್ಷಣಾ, ಪರಿಹಾರ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಭಾರತೀಯ ವಾಯುಪಡೆ ತಿಳಿಸಿದೆ.
key words : Snow-River-Explosion-15 protection-14-Locate the carcass