ಕೊಡಗು,ಜನವರಿ,1,2025 (www.justkannada.in): ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ ನ ಬಲ್ನೋಯಿ ಪ್ರದೇಶದಲ್ಲಿ ಸೇನಾವಾಹನ ಅಪಘಾತವಾಗಿ ಹುತಾತ್ಮರಾದ ಯೋಧ ದಿವಿನ್ ಅಂತ್ಯಕ್ರಿಯೆ ಇಂದು ಹುಟ್ಟೂರು ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಮಾಲಂಬಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು.
ಇಂದು ಬೆಳಿಗ್ಗೆ ಕುಶಾಲನಗರದ ಸರ್ಕಾರಿ ಆಸ್ಪತ್ರೆಯಿಂದ ಯೋಧ ದಿವಿನ್ ಪಾರ್ಥೀವ ಶರೀರವನ್ನು ಹುಟ್ಟೂರಿಗೆ ಕೊಂಡೊಯ್ಯಲಾಯಿತು. ಸಾರ್ವಜನಿಕರ ಅಂತಿಮ ದರ್ಶನದ ಬಳಿಕ ದಿವಿನ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ದಿವಿನ್ ಪಾರ್ಥೀವ ಶರೀರಕ್ಕೆ ಚಿಕ್ಕಪ್ಪನ ಮಗ ಅಗ್ನಿಸ್ಪರ್ಶ ಮಾಡಿದ್ದಾರೆ.
ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ ನ ಬಲ್ನೋಯಿ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸೇನಾವಾಹನ ಕಂದಕಕ್ಕೆ ಉರುಳಿತ್ತು. ಈ ವೇಳೆ ಗಂಭೀರ ಗಾಯಗೊಂಡು ಉಧಂಪುರ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯೋಧ ದಿವಿನ್ ಡಿಸೆಂಬರ್ 29 ರಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು. ನಿನ್ನೆ ಪಾರ್ಥೀವ ಶರೀರವನ್ನ ತರಲಾಗಿತ್ತು.
Key words: kodagu, soldier, Divin, Funeral