ಬೆಂಗಳೂರು,ಆ,24,2019(www.justkannada.in): ರಾಜ್ಯ ಸಚಿವಸಂಪುಟ ವಿಸ್ತರಣೆ ಬಳಿಕ ಅಸಮಾಧಾನಗೊಂಡಿರುವ ಶಾಸಕರನ್ನ ಸಮಾಧಾನಪಡಿಸಲು ಮತ್ತೆ ಸಚಿವ ಸಂಪುಟ ವಿಸ್ತರಣೆಗೆ ರಾಜ್ಯ ಬಿಜೆಪಿ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.
ಎರಡು ದಿನದ ಹಿಂದೆ ದೆಹಲಿಗೆ ತೆರಳಿ ಖಾತೆ ಹಂಚಿಕೆ ಬಗ್ಗೆ ಚರ್ಚಿಸಿ ನಿನ್ನೆ ಬೆಂಗಳೂರಿಗೆ ವಾಪಸ್ ಆಗಿರುವ ಸಿಎಂ ಬಿಎಸ್ ಯಡಿಯೂರಪ್ಪ ಶಾಸಕರ ಅಸಮಾಧಾನದ ಬಗ್ಗೆ ಹೈಕಮಾಂಡ್ ಗೆ ತಿಳಿಸಿದ್ದಾರೆ.
ಈ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಜತೆ ಚರ್ಚಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ ಮತ್ತೆ ಸಂಪುಟ ವಿಸ್ತರಣೆಗೆ ಮನವಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನ ವಂಚಿತ ಕೆಲವು ಶಾಸಕರು ಅಸಮಾಧಾನ ಹೊರ ಹಾಕಿದ್ದು ಈ ಹಿನ್ನೆಲೆ ಮತ್ತೆ ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಯಡಿಯೂರಪ್ಪ ವರಿಷ್ಠರ ಒಪ್ಪಿಗೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಹೀಗಾಗಿ ನಾಲ್ವರು ಶಾಸಕರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದ್ದು, ಶಾಸಕರಾದ ಉಮೇಶ ಕತ್ತಿ, ಜಿ.ಹೆಚ್. ತಿಪ್ಪಾರೆಡ್ಡಿ, ಮುರುಗೇಶ ನಿರಾಣಿ, ಎಂ.ಪಿ. ರೇಣುಕಾಚಾರ್ಯ, ರಾಜುಗೌಡ, ಅವರು ಸಚಿವ ಸ್ಥಾನದ ರೇಸ್ ನಲ್ಲಿದ್ದಾರೆ. ಉಳಿದ ಸ್ಥಾನಗಳನ್ನು ಅನರ್ಹ ಶಾಸಕರಿಗೆ ನೀಡಲಾಗುವುದು ಎಂದು ಹೇಳಲಾಗಿದೆ.
Key words: Soon – four – MLAs – Cabinet- expansion