ಶೀಘ್ರದಲ್ಲಿ ಕರ್ನಾಟಕ ಡ್ರಗ್ಸ್ ಮುಕ್ತ ರಾಜ್ಯವಾಗಲಿದೆ- ಡಿಜಿ&ಐಜಿಪಿ ಪ್ರವೀಣ್ ಸೂದ್ ವಿಶ್ವಾಸ…

ವಿಜಯಪುರ, ಸೆಪ್ಟಂಬರ್,3,2020(www.justkannada.in): ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ. ಈ ನಡುವೆ ಶೀಘ್ರದಲ್ಲಿ ಕರ್ನಾಟಕ ಡ್ರಗ್ಸ್ ಮುಕ್ತ ರಾಜ್ಯವಾಗಲಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.jk-logo-justkannada-logo

ವಿಜಯಪುರದಲ್ಲಿ ಇಂದು ಮಾತನಾಡಿರುವ ಡಿಜಿ&ಐಜಿಪಿ ಪ್ರವೀಣ್ ಸೂದ್, ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹಲವೆಡೆ ದಾಳಿ ಮಾಡಿ ಡ್ರಗ್ಸ್ ಅನ್ನು ವಶಕ್ಕೆ ಪಡೆಯಲಾಗುತ್ತಿದೆ. ಇನ್ನಷ್ಟು ಕ್ರಮಗಳನ್ನು ಕೈಗೊಳ್ಳಲು ಎಸ್ ಪಿಗಳಿಗೆ ಸೂಚನೆ ನೀಡಿದ್ದೇವೆ ಎಂದರು.soon-karnataka-drugs-free-state-dg-igp-pravin-sood-confidence

ರಾಜ್ಯದಲ್ಲಿ ಡ್ರಗ್ಸ್ ಪತ್ತೆ ಹಚ್ಚುವುದು ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವ ಮೂಲಕ ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿಸಲು ತೀರ್ಮಾನ ಮಾಡಲಾಗಿದೆ ಎಂದು ಡಿಜಿ ಐಜಿಪಿ ಪ್ರವೀಣ್ ಸೂದ್ ತಿಳಿಸಿದರು.

Key words: Soon- Karnataka- Drugs Free –State-DG & IGP Pravin Sood -Confidence.