ಉತ್ತರ ಕನ್ನಡ,ಮಾರ್ಚ್,9,2023(www.justkannada.in): ಉತ್ತರ ಕನ್ನಡ ಜಿಲ್ಲೆಯ ಜನರ ಹಲವು ವರ್ಷಗಳ ಕನಸಾಗಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ರಾಜ್ಯ ಸರ್ಕಾರ ಜಾಗ ಮಂಜೂರು ಮಾಡಿದೆ.
ಕುಮಟಾ ನಗರದ ಕೇಂದ್ರ ಭಾಗದಲ್ಲಿ ಸರ್ವೆ ನಂ.440ರಲ್ಲಿ ಏಕಲವ್ಯ ಮಾದರಿ ವಸತಿ ಶಾಲೆ ನಿರ್ಮಾಣಕ್ಕೆ ಮೀಸಲಿಟ್ಟಿದ್ದ 15.35 ಎಕರೆ ಜಾಗವನ್ನೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಒತ್ತಾಯಿಸಿ ಕಳೆದ ಮೂರು ವರ್ಷಗಳಿಂದ ಹೋರಾಟ, ಪ್ರತಿಭಟನೆಗಳು ತೀವ್ರಗೊಂಡಿದ್ದವು. ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಾಡುವುದಾಗಿ ಸರ್ಕಾರ ಭರವಸೆ ನೀಡಿದ ನಂತರ ಕಾರವಾರದ ಕ್ರಿಮ್ಸ್ ವೈದ್ಯಕೀಯ ಕಾಲೇಜಿನಿಂದ ಆಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವನೆ ಕಳಿಸಲಾಗಿತ್ತು. ಈ ಪ್ರಸ್ತಾವವನ್ನೇ ಆರ್ಥಿಕ ಇಲಾಖೆ ತಿರಸ್ಕರಿಸಿತ್ತು. ಇದಾದ ಬಳಿಕ ತೀವ್ರ ಒತ್ತಡಕ್ಕೆ ಮಣಿದ ಸರ್ಕಾರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಒಪ್ಪಿಗೆ ನೀಡಿತ್ತು. ಇದೀಗ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಮಂಜೂರು ಮಾಡಿ ಆದೇಶಿಸಿದೆ.
Key words: Space -allotted – super specialty -hospital – Uttara Kannada- district