ಬೆಂಗಳೂರು,ಅ,9,2019(www.justkannada.in): ನಾಳೆಯಿಂದ ಪ್ರಾರಂಭವಾಗುವ ವಿಧಾನಮಂಡಲ ಅಧಿವೇಶನದ ಚಿತ್ರೀಕರಣಕ್ಕೆ ದೃಶ್ಯ ಮಾಧ್ಯಮಗಳಿಗೆ ನಿರ್ಬಂಧ ಹೇರಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ನಾಳೆಯಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದ್ದು ಸರ್ಕಾರದ ಮೇಲೆ ಮುಗಿ ಬೀಳಲು ವಿಪಕ್ಷಗಳು ಸಜ್ಜಾಗಿವೆ. ಈ ಮಧ್ಯೆ ವಿಧಾನಮಂಡಲ ಅಧಿವೇಶನ ಕಲಾಪವನ್ನ ದೃಶ್ಯ ಮಾಧ್ಯಮಗಳಿಂದ ಚಿತ್ರೀಕರಣಕ್ಕೆ ನಿರ್ಬಂಧ ಹೇರಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ್ದಾರೆ.
ಸಂಸತ್ ಮಾದರಿಯಲ್ಲಿ ಸರ್ಕಾರದಿಂದಲೇ ಮುದ್ರಿತ ದೃಶ್ಯ ಹಂಚಿಕೆ ಮಾಡಲಾಗುತ್ತದೆ. ಸಭಾಧ್ಯಕ್ಷರಿಂದ ಮಾಧ್ಯಮ ನಿರ್ಬಂಧ ಆದೇಶ ಪಾಲನೆ ಮಾಡಲಾಗುತ್ತದೆ ಎಂದು ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಸ್ಪಷ್ಟನೆ ನೀಡಿದ್ದಾರೆ. ಇದುವರೆಗೆ ವಿಧಾನಮಂಡಲ ಅಧಿವೇಶನ ಚಿತ್ರೀಕರಣಕ್ಕೆ ದೃಶ್ಯ ಮಾಧ್ಯಮಗಳಿಗೆ ಅವಕಾಶವಿತ್ತು. ಇದೀಗ ಅಧಿವೇಶನ ಚಿತ್ರೀಕರಣಕ್ಕೆ ನಿರ್ಬಂಧ ಹೇರಲಾಗಿದೆ.
Key words: Restriction – visual media –session-Official order – government …