ಬೆಂಗಳೂರು,ಜೂನ್,7,2023(www.justkannada.in): ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಜೊತೆ ಟೋಲ್ ಸಿಬ್ಬಂದಿ ವಾಗ್ವಾದ ಕಿರಿಕ್ ಪ್ರಕರಣದಲ್ಲಿ ಮಧ್ಯಪ್ರವೇಶಿಸಿರುವ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್, ಶಾಸಕರ ಜೊತೆ ಸೌಜನ್ಯದಿಂದ ವರ್ತಿಸುವಂತೆ ಸೂಚಿಸಿದ್ದಾರೆ.
ಶಾಸಕರ ಜೊತೆ ಸೌಜನ್ಯದಿಂದ ವರ್ತಿಸುವಂತೆ ಸ್ಪೀಕರ್ ಸೂಚನೆ ನೀಡಿದ್ದು, ಶಾಸಕರ ಹಕ್ಕು ಬಾಧ್ಯತೆಗೆ ಧಕ್ಕೆ ತರದಂತೆ ನಡೆದುಕೊಳ್ಳಬೇಕು. ಸಂಬಂಧಿಸಿದವರು ಟೋಲ್ ಸಿಬ್ಬಂದಿಗೆ ಮಾರ್ಗದರ್ಶನ ನೀಡಬೇಕು ಎಂದು ಸ್ಪೀಕರ್ ಯು.ಟಿ ಖಾದರ್ ತಿಳಿಸಿದ್ದಾರೆ.
ಜೂನ್ 4 ರಂದು ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯಲ್ಲಿನ ಟೋಲ್ ಬಳಿ ಮಳವಳ್ಳಿ ಕ್ಷೇತ್ರದ ಶಾಸಕ ನರೇಂದ್ರಸ್ವಾಮಿ ಜೊತೆ ಟೋಲ್ ಸಿಬ್ಬಂದಿ ಕಿರಿಕ್ ಮಾಡಿದ್ದ ಘಟನೆ ನಡೆದಿತ್ತು. ಬೆಂಗಳೂರಿಗೆ ತೆರಳುತ್ತಿದ್ದ ಶಾಸಕ ನರೇಂದ್ರಸ್ವಾಮಿ ಅವರ ಕಾರನ್ನು ಟೋಲ್ ಸಿಬ್ಬಂದಿ ತಡೆದಿದ್ದರು. ವಾಹನದ ಪಾಸ್ ಇದ್ದರೂ ಸಿಬ್ಬಂದಿ ಕಾರು ಪರಿಶೀಲನೆ ನಡೆಸಿದ್ದು, ಈ ವೇಳೆ ಕಾರಿನಲ್ಲಿದ್ದ ಶಾಸಕ ನರೇಂದ್ರಸ್ವಾಮಿ ಜೊತೆ ಟೋಲ್ ಸಿಬ್ಬಂದಿ ವಾಗ್ವಾದ ನಡೆಸಿದ್ದರು. ಪೊಲೀಸರ ಬರಲಿ ಎಂದು ಮಳವಳ್ಳಿ ಶಾಸಕರು ಹೇಳಿದಾಗ, ಯಾವ ಪೊಲೀಸ್ ಬೇಕಾದರೂ ಬರಲಿ, ನಾನು ನೋಡಿರದ ಪೊಲೀಸರಾ ಎಂದು ಟೋಲ್ ಸಿಬ್ಬಂದಿ ಆವಾಜ್ ಹಾಕಿದ್ದರು. ಈ ವಿಡಿಯೋ ವೈರಲ್ ಆಗಿತ್ತು.
Key words: Speaker -UT Khader- instructed -behave -courteously -with -MLAs