ಬೆಂಗಳೂರು,ಮಾರ್ಚ್,24,2021(www.justkannada.in): ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ನೀಡಿರುವ ಏಕಪತ್ನಿ ವ್ರತಸ್ಥರೇ ಎಂಬ ಹೇಳಿಕೆ ಕುರಿತು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಚಿವ ಸುಧಾಕರ್ ಅವರ ಹೇಳಿಕೆ ಇಂದು ಸದನದಲ್ಲೂ ಪ್ರತಿದ್ವನಿಸಿತು. ಸುಧಾಕರ್ ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದರು. ಈ ಮಧ್ಯೆ ಸಚಿವ ಸುಧಾಕರ್ ರಾಜೀನಾಮೆಗೆ ಮಾಜಿ ಸಿಎಂ ಸಿದ್ಧರಾಮಯ್ಯ ಆಗ್ರಹಿಸಿದರು.

ಇನ್ನು ಈ ಕುರಿತು ಮಾತನಾಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸದನದ ಗೌರವಕ್ಕೆ ಧಕ್ಕೆ ಬರುವ ಹಾಗೆ ಮಾತನಾಡಬಾರದು. ನದನದ ಬಗ್ಗೆ, ಸದಸ್ಯರ ಬಗ್ಗೆ ಹಗುರವಾಗಿ ಮಾತನಾಡಬಾರದು. ಯಾರೂ ಸಹ ಸದಸ್ಯರ ಬಗ್ಗೆ ಸದನದ ಬಗ್ಗೆ ಹಗುರವಾಗಿ ಮಾತನಾಡಬಾರದು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
Key words: Speaker- Vishweshwara Hegde Kageri -objected – Minister Sudhakar’s -statement