ಜಾತಿಗಣತಿ ವರದಿ ವಿಚಾರ: ವಿಶೇಷ ಸಚಿವ ಸಂಪುಟ ಸಭೆ ಆರಂಭ

ಬೆಂಗಳೂರು,ಏಪ್ರಿಲ್,17,2025 (www.justkannada.in): ಜಾತಿ ಜನಗಣತಿ ವರದಿ ಬಿಡುಗಡೆ ಕುರಿತು ಚರ್ಚಿಸಲು ಇಂದು ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟ ಸಭೆ ಆರಂಭವಾಗಿದೆ.

ಇಂದು ವಿಧಾನಸೌಧದದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಎಲ್ಲಾ ಸಚಿವರು ಭಾಗಿಯಾಗಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಸಚಿವರು ತಮ್ಮ ಅಭಿಪ್ರಾಯ ತಿಳಿಸಲಿದ್ದಾರೆ. ಇಂದು ಜಾತಿ ಜನಗಣತಿ ವರದಿ ಭವಿಷ್ಯ ನಿರ್ಧಾರವಾಗಲಿದೆ.

ವರದಿ ಬಗ್ಗೆ ಚರ್ಚೆಗೂ ಮುನ್ನ ಆರುಪುಟಗಳ ಪ್ರಸ್ತಾವನೆಯನ್ನ ಸಭೆಯಲ್ಲಿ ಮಂಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.  ಸಚಿವ ಸಂಪುಟ ಸಭೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಕಚೇರಿಯಲ್ಲಿ ಪ್ರತ್ಯೇಕವಾಗಿ ಸಭೆ ನಡೆಸಿದ್ದರು.

Key words: Caste census, report, Special, cabinet meeting