ಬೆಂಗಳೂರು, ಮೇ 8, 2020 (www.justkannada.in): ಲಾಕ್ಡೌನ್ ಇರುವ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಚಮ್ಮಾರರಿಗೆ ನೆರವಾಗಲು ಮುಖ್ಯಮಂತ್ರಿ ಯಡಿಯೂರಪ್ಪ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.
ಕೋವಿಡ್ -19ರ ಪರಿಣಾಮ ಹಾಗೂ ಲಾಕ್ ಡೌನ್ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿ ಚರ್ಮ ವೃತ್ತಿಯಲ್ಲಿ ತೊಡಗಿದವರು ಸಂಕಷ್ಟದಲ್ಲಿದ್ದಾರೆ. ಅವರ ಜೀವನೋಪಾಯಕ್ಕೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ರಾಜ್ಯದ 11,722 ಕುಟುಂಬಗಳಿಗೆ ಪ್ರತಿ ಕುಟುಂಬಕ್ಕೆ ತಲಾ 5 ಸಾವಿರದಂತೆ ಒಂದು ಬಾರಿ ಪರಿಹಾರವನ್ನು ಸರ್ಕಾರ ನೀಡಿದೆ. ಡಾ.ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಮೂಲಕ ಈ ಫಲಾನುಭವಿಗಳಿಗೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದು ಹೇಳಿದ್ದಾರೆ.