ಬೆಂಗಳೂರು, ಆಗಸ್ಟ್.15,2024 (www.justkannada.in): ಜಲಮಂಡಳಿ ನೌಕರರಿಗಾಗಿ ವಿಶೇಷ ಕಾರ್ಯಕ್ರಮಗಳ ಅನುಷ್ಠಾನಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.
ಬೆಂಗಳೂರು ಜಲಮಂಡಳಿಯಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಜಲಮಂಡಳಿ ಅಧ್ಯಕ್ಷಡಾ. ವಿ.ರಾಮ್ಪ್ರಸಾತ್ ಮನೋಹರ್ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಬೆಂಗಳೂರು ಮಹಾನಗರಕ್ಕೆ 100ಕಿ.ಮೀ ದೂರದ ಕಾವೇರಿ ನದಿಯಿಂದ ನೀರು ಒದಗಿಸುವಲ್ಲಿ ಜಲಮಂಡಳಿಯ ಸಿಬ್ಬಂದಿಯ ಪಾತ್ರ ಅಪಾರವಾಗಿದೆ. ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ಸೂಚನೆ ಅನುಸಾರ ಈ ಜಲಮಂಡಳಿಯ ನೌಕರರ ಕಲ್ಯಾಣಕ್ಕಾಗಿ ವಿಶೇಷ ಕಾರ್ಯಕ್ರಮಮಗಳನ್ನು ಹಮ್ಮಿಕೊಳ್ಳಲು ಪ್ರಸಕ್ತ ಸಾಲಿನಲ್ಲಿ ನಿರ್ಧರಿಸಲಾಗಿದೆ. ಕಾವೇರಿ 5ನೇ ಹಂತದ ಯೋಜನೆ ಈ ತಿಂಗಳಾಂತ್ಯಕ್ಕೆ ಅನುಷ್ಠಾನವಾಗುವ ಸಾಧ್ಯತೆ ಇದೆ ಎಂದರು.
ಇದೇ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಅವರ ಜೀವನ ಚರಿತ್ರೆ ಒಳಗೊಂಡ ನನ್ನ ಸತ್ಯಾನ್ವೇಷಣೆ ಪುಸ್ತಕವನ್ನು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಲಮಂಡಳಿಯ ಪ್ರಧಾನ ಮುಖ್ಯ ಎಂಜನಿಯರ್ ಸುರೇಶ್, ಮುಖ್ಯ ಎಂಜನಿಯರ್ ಗಳು ಮತ್ತು ಅಪರ ಮುಖ್ಯ ಎಂಜನಿಯರ್ ಗಳು, ಜಲಮಂಡಳಿ ನೌಕರರ ವಿವಿಧ ಸಂಘಗಳ ಅಧ್ಯಕ್ಷರುಗಳು ಸೇರಿದಂತೆ ಅನೇಕರು ಇದ್ದರು.
“ಜನನಿ ಜನ್ಮಭೂಮಿ” ಎಂಬ ನೂತನ ದೇಶಭಕ್ತಿಗೀತೆ ಬಿಡುಗಡೆ
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಡಾ. ಬಿ.ಆರ್ .ಅಂಬೇಡ್ಕರ್ ಜಯಂತಿಯ ಪ್ರಯುಕ್ತ ಮಂಡಳಿ ನೌಕರರಿಗಾಗಿ ಇತ್ತೀಚೆಗೆ ಏರ್ಪಡಿಸಿದ್ದ ಕ್ರಾಂತಿಗೀತೆಗಳ ಸ್ಪರ್ಧೆಯಲ್ಲಿ ವಿಜೇತರಾದ ಉದಯೋನ್ಮುಖ ಗಾಯಕ ಕುಮಾರ್ .ಎಚ್.ಟಿ ರವರು ಹಾಡಿರುವ ನೂತನ ದೇಶಭಕ್ತಿಗೀತೆಯನ್ನು ಇಂದು ಮಂಡಳಿಯ ಅಧ್ಯಕ್ಷರಾದ ಡಾ.ರಾಮಪ್ರಸಾತ್ ಮನೋಹರ್ ರವರು ಕಾವೇರಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಿದರು.
Key words: special programs, water board,employees- Dr.V.Ram Prasat Manohar