ಕುಂಭಮೇಳ ಪ್ರಯುಕ್ತ ಬೆಂಗಳೂರಿನಿಂದ ಪ್ರಯಾಗ್ ರಾಜ್ ಗೆ ವಿಶೇಷ ರೈಲು

ಬೆಂಗಳೂರು,ಡಿಸೆಂಬರ್,25,2024 (www.justkannada.in):  ಕುಂಭಮೇಳದಲ್ಲಿ ಭಾಗವಹಿಸುವ ಪ್ರಯಾಣಿಕರ ನಿರೀಕ್ಷಿತ ದಟ್ಟಣೆಯನ್ನು ಪೂರೈಸಲು ನೈಋತ್ಯ ರೈಲ್ವೆ ಏಕಮಾರ್ಗ ವಿಶೇಷ ರೈಲನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ.

ಈ ರೈಲು (06577) ಡಿಸೆಂಬರ್ 26, 2024 (ಗುರುವಾರ) ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ನಿಲ್ದಾಣದಿಂದ 23:00 ಗಂಟೆಗೆ ಹೊರಟು, ಶನಿವಾರ (ಡಿಸೆಂಬರ್ 28, 2024) 13:30 ಗಂಟೆಗೆ ಪ್ರಯಾಗ್‌ರಾಜ್ ತಲುಪಲಿದೆ.

ಈ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ ಪೆಟ್ಟೈ, ಕಟ್ಪಾಡಿ, ರೇಣಿಗುಂಟ, ಗುಡೂರು, ವಿಜಯವಾಡ, ವಾರಂಗಲ್, ಬಲ್ಹಾರ್ಷಾ, ನಾಗ್ಪುರ, ಇಟಾರ್ಸಿ, ಜಬಲ್ಪುರ್, ಕಟ್ನಿ, ಸತ್ನಾ ಮತ್ತು ಮಾಣಿಕ್ಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಈ ರೈಲು 15 ಸ್ಲೀಪರ್ ಕ್ಲಾಸ್ ಬೋಗಿಗಳು, 3 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು 2 ಎಸ್ಎಲ್ಆರ್ / ಡಿ ಸೇರಿದಂತೆ 20 ಬೋಗಿಗಳನ್ನು ಒಳಗೊಂಡಿರುತ್ತದೆ.

ಈ ರೈಲಿನ ಪ್ರತಿ ನಿಲ್ದಾಣದ ಆಗಮನ/ನಿರ್ಗಮನ ಸಮಯ ತಿಳಿಯಲು ಪ್ರಯಾಣಿಕರು ಭಾರತೀಯ ರೈಲ್ವೆಯ ವೆಬ್ ಸೈಟ್ www.enquiry.indianrail.gov.in ನಲ್ಲಿ ಲಭ್ಯವಿದೆ ಅಥವಾ 139 ನಂಬರ್ ಗೆ ಡಯಲ್ ಮಾಡಿ ಮಾಡಿ ಮಾಹಿತಿ ಪಡೆಯಬಹುದು.

key words: Special train, Bangalore, Prayag Raj, Kumbhamela