ಮೈಸೂರು,ಅಕ್ಟೊಂಬರ್,01,2020(www.justkannada.in) : ನಾಡಹಬ್ಬ ದಸರಾ ಮಹೋತ್ಸವ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಆನೆಗಳ ತಂಡವನ್ನು ವೀರನಹೊಸಳ್ಳಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಾಂಪ್ರದಾಯಿಕವಾಗಿ ಕರೆತರುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಇಂದು ಗಜಪಡೆಯು ಮೈಸೂರಿಗೆ ಆಗಮಿಸಲಿದ್ದು, ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸರಳ ಮತ್ತು ಸಾಂಪ್ರದಾಯಿಕವಾಗಿ ದಸರಾ ನಡೆಯಲಿದೆ. ಈ ಸಂಬಂಧ ವೀರನಹೊಸಳ್ಳಿಯಲ್ಲಿ ಗಜಪಡೆಗೆ ವಿಶೇಷ ಪೂಜೆ ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ಅಧಿಕಾರಿಗಳಷ್ಟೇ ಭಾಗಿ
ಸಾಂಸ್ಕೃತಿಕ ನಗರಿ ಮೈಸೂರಿನತ್ತ ಗಜಪಡೆ ಪ್ರಯಾಣ ಬೆಳೆಸಿದೆ. ಪೂಜೆ ಕಾರ್ಯಕ್ರಮದಲ್ಲಿ ಕೇವಲ ಅಧಿಕಾರಿಗಳಷ್ಟೇ ಭಾಗಿಯಾಗಿದ್ದು, ಜನಪ್ರತಿನಿಧಿಗಳು ಭಾಗಿಯಾಗಿಲ್ಲ.
ಗಜಪಡೆ ಅರಣ್ಯ ಭವನದಲ್ಲಿ ತಂಗಲು ವ್ಯವಸ್ಥೆ
ಗಜಪಡೆ ಸ್ವಾಗತಕ್ಕೆ ಅರಣ್ಯ ಭವನದಲ್ಲಿ ಸಕಲ ಸಿದ್ಧತೆ ಮಾಡಲಾಗುತ್ತಿದ್ದು, ವೀರನ ಹೊಸಹಳ್ಳಿಯಿಂದ ಹೊರಟ ಗಜಪಡೆ ಮೈಸೂರಿನ ಅರಣ್ಯ ಭವನಕ್ಕೆ ಮಧ್ಯಾಹ್ನದ ವೇಳೆಗೆ ಬಂದಿಳಿಯಲಿವೆ. ಕ್ಯಾಪ್ಟನ್ ಅಭಿಮನ್ಯು ತಂಡವನ್ನು ಸ್ವಾಗತಿಸಲು ಸಾಂಸ್ಕೃತಿಕ ನಗರಿ ಸಿದ್ಧವಾಗಿದೆ. ಆನೆಗಳು ಅರಣ್ಯ ಭವನದಲ್ಲಿ ತಂಗಲು ವ್ಯವಸ್ಥೆ ಮಾಡಲಾಗಿದೆ.
key words : Special-worship-service-Gazette-Veeranohasahalli