ಬೆಂಗಳೂರು,ಆಗಸ್ಟ್,16,2023(www.justkannada.in): ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಸ್ಥಗಿತ ಕುರಿತು ಊಹಾಪೋಹಗಳು ಕೇಳಿಬರುತ್ತಿದ್ದು, ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಈ ವಿಚಾರ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ, ಯೋಜನೆ ನಿಂತು ಹೋಗುತ್ತದೆ ಅಂತ ಊಹಾಪೋಹಗಳು ಕೇಳಿ ಬರುತ್ತಿವೆ. ಶಕ್ತಿಯೋಜನೆ ನಿಲ್ಲಿಸಲಾಗುತ್ತೆ ಎಂಬ ಊಹಾಪೋಹ ಹಬ್ಬಿಸಲಾಗುತ್ತದೆ. ಒಂದು ಪಕ್ಷದವರು ಮಾಡಿಸುತ್ತಿದ್ದಾರೆ. ಇನ್ನೂ 10 ವರ್ಷಗಳಕಾಲ ಶಕ್ತಿ ಯೋಜನೆ ಮುಂದುವರೆಯುತ್ತೆ ಮಹಿಳೆಯರು ಯಾರೂ ಕೂಡ ಪಾಸ್ ಪಡೆಯುವ ಅಗತ್ಯವಿಲ್ಲ ರಾಜ್ಯದಲ್ಲಿ ಮುಂದಿನ ಬಾರಿಯೂ ನಾವೇ ಅಧೀಕಾರಕ್ಕೆ ಬರುತ್ತೇವೆ. ಹೀಗಾಗಿ ಶಕ್ತಿ ಯೋಜನೆ ಮುಂದುವರೆಯುತ್ತದೆ ಎಂದರು.
ಈ ಕುರಿತು ಪ್ರಕಟಣೆ ಹೊರಡಿಸಿರುವ ಕೆಎಸ್ ಆರ್ ಟಿಸಿ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಯೋಜನೆ ಸ್ಥಗಿತಗೊಳ್ಳಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿ ಹಬ್ಬಿಸುತ್ತಿದ್ದಾರೆ. ಯಾವುದೇ ಗೊಂದಲದ ಸಂದೇಶಗಳನ್ನ ಜನರು ನಂಬಬಾರದು ಎಂದು ತಿಳಿಸಿದೆ.
Key words: Speculation- shakti yojane- not stopped-Transport -Minister -Ramalingareddy