ಬೆಂಗಳೂರು ,ಆ,4,2020(www.justkannada.in): ಕೊರೋನಾ ಸೋಂಕು ತಗುಲಿರುವ ಹಿನ್ನೆಲೆ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಐತಿಹಾಸಿಕ ಅಯೋಧ್ಯೆ ರಾಮ ಮಂದಿರ ನಿರ್ಮಾಣ ಶಿಲಾನ್ಯಾಸ ಕಾರ್ಯಕ್ರಮದ ಬಗ್ಗೆ ಹರ್ಷ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಶತಮಾನಗಳ ನಂತರ ಮತ್ತೆ ಅಯೋಧ್ಯೆಯಲ್ಲಿ ಶ್ರೀರಾಮ ಪಟ್ಟಾಭಿಷೇಕ ನಡೆಯಲಿದೆ. ಸರ್ವೋಚ್ಛ ನ್ಯಾಯಾಲಯದ ತೀರ್ಪಿನನ್ವಯ ಭಾರತೀಯರ ಪರಮ ಪವಿತ್ರ ಶ್ರದ್ಧಾಕೇಂದ್ರ ಅಯೋಧ್ಯೆಯಲ್ಲಿ ಭವ್ಯವಾದ ಶ್ರೀರಾಮ ಮಂದಿರ ನಿರ್ಮಾಣವಾಗಲಿದ್ದು, ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಂದಿರಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಹಾಗೆಯೇ ಮತ್ತೊಂದು ಟ್ವೀಟ್ ನಲ್ಲಿ ಅಗಣಿತ ಸಾಧು-ಸಂತರ, ಶ್ರದ್ಧಾಳುಗಳ ತಪಸ್ಸು, ಪರಿಶ್ರಮ, ಬಲಿದಾನ, ಪ್ರಾರ್ಥನೆಗಳು ಸಾಕಾರಗೊಳ್ಳುವ ಸಮಯ ಬಂದಿದೆ. ಜನಾಂದೋಲನಗಳಲ್ಲಿ ಪಾಲ್ಗೊಂಡು, ಅನೇಕ ರೀತಿಯ ಸವಾಲುಗಳನ್ನು ಎದುರಿಸಿ, ಹೋರಾಟಗಳನ್ನು ಮಾಡಿದ ಪಕ್ಷದ ಎಲ್ಲ ನಾಯಕರು, ಕಾರ್ಯಕರ್ತರ ಪ್ರಯತ್ನಗಳನ್ನು ಸ್ಮರಿಸುತ್ತಾ,ಈ ಹೆಮ್ಮೆಯ ಐತಿಹಾಸಿಕ ಕ್ಷಣವನ್ನು ಸ್ವಾಗತಿಸೋಣ ಎಂದು ಸಿಎಂ ಬಿಎಸ್ ವೈ ಟ್ವೀಟ್ ಮಾಡಿದ್ದಾರೆ.
Key words: Sri Rama –Ayodhyabhoomi pooja-Tweet -CM BS Yeddyurappa