ನನಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ನಿಭಾಯಿಸಲು ಸಿದ್ದ-ಮಾಜಿ ಸಚಿವ ಶ್ರೀರಾಮುಲು

ಕೋಲಾರ,ಫೆಬ್ರವರಿ,5,2025 (www.justkannada.in): ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರನ್ನ ಬದಲಾವಣೆ ಮಾಡಬೇಕೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣ ಪಟ್ಟು ಹಿಡಿದಿದ್ದು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ್ದಾರೆ. ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ  ಸ್ಥಾನ ನೀಡಿದರೇ ನಿಭಾಯಿಸುವುದಾಗಿ ಮಾಜಿ ಶಾಸಕ ಶ್ರೀರಾಮುಲು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಮಾಜಿ ಶಾಸಕ ಶ್ರೀರಾಮುಲು, ನಾನು ಬಿಜೆಪಿ ರಾಜ್ಯಾಧ್ಯಕ್ಷ ಆಗಲು ಸಿದ್ದ. ಆದರೆ ನಾನು ಬಿವೈ ವಿಜಯೇಂದ್ರ ಬದಲಾವಣೆಗೆ ನಾನು ಒತ್ತಾಯಿಸಲ್ಲ. ನನ್ನ ನೇತೃತ್ವದಲ್ಲಿ 150 ಸೀಟು ಗೆಲ್ತೀವಿ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನನಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬಿಟ್ಟು ಕೊಟ್ಟರೇ ನಿಭಾಯಸುತ್ತೇನೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಇದ್ದಾರೆ.  ಆಕಸ್ಮಿಕವಾಗಿ ಬದಲಾದ್ರೆ ನಾನು ರಾಜ್ಯಾಧ್ಯಕ್ಷರಾಗಲು ಸಿದ್ದ ಯತ್ನಾಳ್ ನನ್ನ ಹೆಸರು ಪ್ರಸ್ತಾಪ ಮಾಡಿದ್ದಾರೆ. ಒಂದು ವೇಳೆ ನನಗೆ ಅವಕಾಶ ಕೊಟ್ಟರೇ ನಿಭಾಯಿಸುತ್ತೇನೆ ಎಂದು ಶ್ರೀರಾಮುಲು ತಿಳಿಸಿದರು.

Key words:  post, BJP state president, ready, Sriramulu