ಕಲಬುರಗಿ,ಏಪ್ರಿಲ್,18,2025 (www.justkannada.in): ಪುತ್ರನನ್ನು ಸಿಎಂ ಮಾಡಲು ಮಲ್ಲಿಕಾರ್ಜುನ ಖರ್ಗೆ ಅವರೇ ರಾಜ್ಯ ಸರ್ಕಾರ ಬೀಳಿಸುತ್ತಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀರಾಮುಲು, ಈಗಾಗಲೇ ಸಿಎಂ ಹುದ್ದೆಗೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ಫೈಟ್ ನಡೆಯುತ್ತಿದೆ. ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗೆ ಮೂರನೇ ವ್ಯಕ್ತ ಪ್ರವೇಶ ಪಡೆದಿದ್ದಾರೆ . ತಮ್ಮ ಮಗನನ್ನು ಸಿಎಂ ಮಾಡಲು ಮಲ್ಲಿಕಾರ್ಜುನ ಖರ್ಗೆ ಅವರು ಸರ್ಕಾರವನ್ನು ಬೀಳಿಸಲಿದ್ದಾರೆ ಎಂದರು.
ಅದಕ್ಕಾಗಿ ಮೊನ್ನೆ ಸರ್ಕಾರ ಬೀಳುವ ಬಗ್ಗೆ ಮಾತನಾಡಿದ್ದಾರೆ. ಪ್ರಧಾನಿ ಮೋದಿ ಅವರು ಈ ಸರ್ಕಾರವನ್ನು ಬೀಳಿಸುತ್ತಾರೆ ಅಂತ ಹೇಳಿದ್ದಾರೆ. ಇಬ್ಬರ ಕಾದಾಟದಲ್ಲಿ ಮಗನನ್ನು ಸಿಎಂ ಮಾಡೋಕೆ ಹೊರಟಿದ್ದಾರೆ ಎಂದು ಶ್ರೀರಾಮುಲು ತಿಳಿಸಿದರು.
Key words: CM, son, Mallikarjuna Kharge, government, Sriramulu