SSLC ಪರೀಕ್ಷೆ-2ರ ವೇಳಾಪಟ್ಟಿ ಬಿಡುಗಡೆ.

ಬೆಂಗಳೂರು, ಮೇ 9,2024 (www.justkannada.in): 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಶೇ 73.04ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ . ಈ ಬೆನ್ನಲ್ಲೇ ಇದೀಗ ಅನುತ್ತೀರ್ಣರಾದವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ ವೇಳಾಪಟ್ಟಿ ಪ್ರಕಟವಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ದಿನಾಂಕ ನಿಗದಿಯಾಗಿದ್ದು, ವೇಳಾಪಟ್ಟಿ ಪ್ರಕಟಿಸಿದೆ.  ಜೂನ್‌ 7ರಿಂದ 14ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ನಡೆಯಲಿದೆ. ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30ರವರೆಗೆ ಪರೀಕ್ಷೆಗಳು  ನಡೆಯಲಿವೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ ವೇಳಾಪಟ್ಟಿ ಹೀಗಿದೆ

7-6-2024- ಪ್ರಥಮ ಭಾಷೆ

8-6-2024- ತೃತೀಯ ಭಾಷೆ

10-6-2024- ಗಣಿತ, ಸಮಾಜ ಶಾಸ್ತ್ರ

11-6-2024- ಅರ್ಥ ಶಾಸ್ತ್ರ, ಎಲಿಮೆಂಟ್ಸ್‌ ಆಫ್‌ ಎಲೆಕ್ಟ್ರಿಕಲ್‌ ಇಂಜಿನಿಯರಿಂಗ್‌

12-6-2024- ವಿಜ್ಞಾನ ಹಾಗೂ ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ

13-6-2024- ದ್ವಿತೀಯ ಭಾಷೆ (ಇಂಗ್ಲೀಷ್‌ ಹಾಗೂ ಕನ್ನಡ)

14-6-2024 – ಸಮಾಜ ವಿಜ್ಞಾನ

Key words: SSLC -Exam-2- Schedule- Released