ಬೆಂಗಳೂರು,ಮೇ,9,2024 (www.justkannada.in): ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಈ ಬಾರಿ ಶೇ 73.04 ರಷ್ಟು ಫಲಿತಾಂಶ ಬಂದಿದೆ.
ಈ ಮಧ್ಯೆ ಈ ಬಾರಿ ಬಾಗಲಕೋಟೆಯ ಅಂಕಿತಾ ಬಸಪ್ಪ ಮೊದಲನೇ ಸ್ಥಾನಗಳಿಸಿದ್ದಾರೆ. ಅಂತಿತಾ ಬಸಪ್ಪ 625ಕ್ಕೆ 625 ಅಂಕಗಳನ್ನ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಬೆಂಗಳೂರಿನ ಮೇದಾ ಪಿ ಶೆಟ್ಟಿ , ಮಧುಗಿರಿಯ ಹರ್ಷಿತಾ ಡಿಎಂ, ದಕ್ಷಿಣ ಕನ್ನಡ ಜಿಲ್ಲೆಯ ಚಿನ್ಮಯ್ ಚಿಕ್ಕೋಡಿಯ ಸಿದ್ದಾಂತ್ 624 ಅಂಕಗಳನ್ನ ಗಳಿಸಿ 2ನೇ ಸ್ಥಾನದಲ್ಲಿದ್ದಾರೆ.
ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 8,59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರದ್ದೇ ಮೈಲುಗೈಯಾಗಿದೆ. 441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು. 2,87,416 ಮಂದಿ ಬಾಲಕರು ತೇರ್ಗಡೆಯಾಗಿದ್ದು, ತೇರ್ಗಡೆ ಪ್ರಮಾಣ ಶೇ 65.90 ಇದೆ. 3,43,788 ಬಾಲಕಿಯರು ತೇರ್ಗಡೆಯಾಗಿದ್ದು, ತೇರ್ಗಡೆ ಪ್ರಮಾಣ ಶೇ 81.11 ಇದೆ.
Key words: SSLC, Exam, Result, Toppers