ಬೆಂಗಳೂರು,ಆ,7,2020(www.justkannada.in): ಮಹಾಮಾರಿ ಕೊರೋನಾ ಆತಂಕದ ನಡುವೆ ಪರೀಕ್ಷೆ ಬರೆದಿದ್ದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು ಆಗಸ್ಟ್ 10 ರಂದು ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಳ್ಳಲಿದೆ.
ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಆ.10ರಂದು ಎಸ್ಎಸ್ಎಲ್ಸಿ ಫಲಿತಾಂಶ ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. 2019-20ನೇ ಸಾಲಿನಲ್ಲಿ ಸುಮಾರು 8.5 ಲಕ್ಷ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದು ಪರೀಕ್ಷೆ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.
ಆ.7ರಂದು ಫಲಿತಾಂಶ ಪ್ರಕಟವಾಗಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಸಚಿವ ಸುರೇಶ್ ಕುಮಾರ್, ಫಲಿತಾಂಶ ಪ್ರಕಟ ಯಾವಗ ಎಂಬುದು ಇನ್ನೂ ನಿಶ್ಚಯವಾಗಿಲ್ಲ ಎಂದಿದ್ದರು. ಇದೀಗ ಎಲ್ಲ ಗೊಂದಲಗಳಿಗೂ ತೆರೆ ಬಿದ್ದಿದೆ.
Key words: SSLC- Exam- Results- published – 10th August.