ಬೆಂಗಳೂರು,ಜೂ,24,2020(www.justkannada.in): ನಾಳೆಯಿಂದ ಪ್ರಾರಂಭವಾಗಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಎಲ್ಲಾ ರೀತಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಇಂದು ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಸಚಿವ ಸುರೇಶ್ ಕುಮಾರ್, 8 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 2,800ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಿವೆ. ಪ್ರತಿಯೊಂದು ಕೊಠಡಿಯಲ್ಲಿ 18 ಮಂದಿ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ಡಾಯವಾಗಿದ್ದು ವಿದ್ಯಾರ್ಥಿಗಳನ್ನ ಟೆಸ್ಟ್ ಮಾಡಲಾಗುತ್ತದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು ಎಲ್ಲಾ ರೀತಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದ ಗೇಟ್ ಬಳಿ ಅಂತರ ಕಾಯ್ದುಕೊಳ್ಳಿ ಅನಗತ್ಯವಾಗಿ ಕಿಟಕಿ ಬಾಗಿಲು ಮುಟ್ಟಬೇಡಿ. ಅನಾರೋಗ್ಯವಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಈಗ 10 ಮಕ್ಕಳಿಗೆ ಪರೀಕ್ಷೆಗೆ ಅವಕಾಶವಿಲ್ಲ. ಕ್ವಾರಂಟೈನ್ ನಲ್ಲಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶವಿಲ್ಲ. ಸೋಂಕಿತ ಮಕ್ಕಳಿಗೆ ಆಗಸ್ಟ್ ನಲ್ಲಿ ಪರೀಕ್ಷೆ ನೀಡಲಾಗುತ್ತದೆ ಎಂದು ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದರು.
Key words: SSLC -examination -Education Minister -Suresh Kumar ..