ಬೆಂಗಳೂರು,ಸೆಪ್ಟಂಬರ್,5,2023(www.justkannada.in): ಫೇಲ್ ಆದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ಇನ್ಮುಂದೆ ವರ್ಷಕ್ಕೆ 3 ಬಾರಿ ಪರೀಕ್ಷೆ ಬರೆಯಬಹುದು. ಹೌದು, ಎಸ್ ಎಸ್ ಎಲ್ ಸಿ ಮತ್ತು ಪಿಯು ವಿದ್ಯಾರ್ಥಿಗಳಿಗೆ ವರ್ಷಕ್ಕೆ ಮೂರು ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಫೇಲ್ ಅಥವಾ ಕಡಿಮೆ ಅಂಕ ಬಂದವರು 3 ಬಾರಿ ಪರೀಕ್ಷೆ ಬರೆಯಬಹುದು. ವರ್ಷದಲ್ಲಿ ಇನ್ಮುಂದೆ ಕಲಿಕಾ ಚೇತರಿಕೆಯ ಕಾರಣದಿಂದಾಗಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಬಾರಿ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಘೋಷಣೆ ಮಾಡಿದರು.
ಯಾವುದೇ ಕಾರಣಕ್ಕೂ ಮಕ್ಕಳಿಗೆ ಒಂದು ವರ್ಷ ವ್ಯರ್ಥ ಆಗಬಾರದು ಎಂದು ವರ್ಷದಲ್ಲಿ ಮೂರು ಬಾರಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವಂತಹ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
Key words: SSLC – PUC- students – exam- thrice – year- Minister -Madhu Bangarappa.