ಬೆಂಗಳೂರು,ಮೇ,9,2024 (www.justkannada.in): ರಾಜ್ಯದಲ್ಲಿ 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇಂದು ಬೆಳಗ್ಗೆ 10.30ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ.
ರಾಜ್ಯದ ಸುಮಾರು 8 ಲಕ್ಷಕ್ಕೂ ಅಧಿಕ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಫಲಿತಾಂಶವನ್ನು ನೋಡಲು ಕಾದು ಕುಳಿತಿದ್ದಾರೆ. ಇಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟ ಮಾಡಲಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಲಿರುವ ಸುದ್ದಿಗೋಷ್ಠಿಯಲ್ಲಿ ಸುಮಾರು 8.69 ಲಕ್ಷ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದ್ದು, ಸುದ್ದಿಗೋಷ್ಠಿ ನಡೆಸಿದ ನಂತರ ಪರೀಕ್ಷಾ ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಫಲಿತಾಂಶ ನೋಡಲು ಅವಕಾಶ ಮಾಡಿ ಕೊಡಲಾಗಿದೆ. ಫಲಿತಾಂಶ ನೋಡಲು ಅಧಿಕೃತ ವೆಬ್ಸೈಟ್ https://karresults.nic.in/ ಗೆ ಭೇಟಿ ನೀಡಿ.
Key words: SSLC, result, karnataka