ಬೆಂಗಳೂರು,ನವೆಂಬರ್,12,2020(www.justkannada.in): ರಾಜ್ಯದಲ್ಲಿ ಶಾಲಾ- ಕಾಲೇಜು ಆರಂಭದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿಲ್ಲ ಎಂದು ಕಾನೂನು ಸಚಿವ ಮಾಧುಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಇಂದು ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆ ಬಳಿಕ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಮಾಧುಸ್ವಾಮಿ, ಶಾಲಾ- ಕಾಲೇಜು ಆರಂಭದ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿಲ್ಲ. ಸದ್ಯಕ್ಕೆ ರಾಜ್ಯದಲ್ಲಿ ಶಾಲೆ ಆರಂಭ ಇಲ್ಲ. ಶಾಲೆ ಆರಂಭದ ಬಗ್ಗೆ ದಿನಾಂಕ ನಿಗದಿಯಾಗಿಲ್ಲ ಎಂದರು.
ತಜ್ಞರ ಅಭಿಪ್ರಾಯ ಪಡೆದ ಬಳಿಕ ಸಿಎಂ ಬಿಎಸ್ ಯಡಿಯೂರಪ್ಪ ಶಾಲೆ ಆರಂಭದ ಬಗ್ಗೆ ಸಭೆ ನಡೆಸಲಿದ್ದಾರೆ. ಸಭೆ ನಡೆಸಿ ಚರ್ಚಿಸಿದ ಬಳಿಕ ಶಾಲೆ ಆರಂಭದ ಬಗ್ಗೆ ನಿರ್ಧಾರ ಮಾಡಲಾಗುತ್ತದೆ ಎಂದು ಸಚಿವ ಮಾಧು ಸ್ವಾಮಿ ಸ್ಪಷ್ಟನೆ ನೀಡಿದರು.
Key words: start-school -not discussed – Cabinet meeting – Minister-Madhuswamy