ಬೆಂಗಳೂರು,ನವೆಂಬರ್,2,2020(www.justkannada.in): ರಾಜ್ಯದಲ್ಲಿ ಶಾಲೆಗಳ ಆರಂಭ ವಿಚಾರ ಕುರಿತು ಚರ್ಚಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬು ಕುಮಾರ್ ಅವರು ಕರೆದಿದ್ದ ವಿಡಿಯೋ ಕಾನ್ಫರೆನ್ಸ್ ಸಭೆ ತಾಂತ್ರಿಕ ಸಮಸ್ಯೆಯಿಂದ ನಾಳೆಗೆ ಮುಂದೂಡಿಕೆಯಾಗಿದೆ.
ಶಾಲೆಗಳ ಆರಂಭ ವಿಚಾರ, ಶಾಲೆಗಳ ಸ್ಥಿತಿಗತಿ ಬಗ್ಗೆ ಚರ್ಚಿಸಲು ಇಂದು ಬೆಳಿಗ್ಗೆ 11 ಗಂಟೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬು ಕುಮಾರ್ ನೇತೃತ್ವದ ಎಲ್ಲಾ ಜಿಲ್ಲೆಗಳ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿಡಿಯೋ ಕಾನ್ಫರೆನ್ಸ್ ಸಭೆ ಕರೆಯಲಾಗಿತ್ತು.
ಆದರೆ ಸರ್ವರ್ ಸಮಸ್ಯೆಯಿಂದ ಇಂದಿನ ಸಭೆ ರದ್ದಾಗಿದ್ದು ನಾಳೆಗೆ ಮುಂದೂಡಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಾಳೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಯಲಿದ್ದು ಸಭೆಯಲ್ಲಿ ಶಾಲೆಗಳ ಆರಂಭದಿಂದ ಆಗುವ ಸಾಧನ ಬಾಧಕಗಳ ಬಗ್ಗೆ ಚರ್ಚೆ ನಡೆಯಲಿದೆ.
Key words: Start –Schools-Education Department -video conference meeting – postpones -tomorrow