ಯಾದಗಿರಿ,ಆಗಸ್ಟ್,15,2021(www.justkannada.in): ರಾಜ್ಯದಲ್ಲಿ ಕೊರೊನಾ 3ನೇ ಅಲೆ ಭೀತಿ ಎದುರಾಗಿದ್ದು ಈ ನಡುವೆಯೇ ಶಾಲಾ-ಕಾಲೇಜು ಆರಂಭಕ್ಕೆ ಸರ್ಕಾರ ನಿರ್ಧಾರ ಮಾಡಿದೆ.
9 ರಿಂದ 12ನೇ ತರಗತಿಗಳನ್ನ ತೆರೆಯಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಯಾದಗಿರಿಯಲ್ಲಿ ಮಾತನಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಕೊವಿಡ್ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ತೆರೆಯಲಾಗುತ್ತದೆ. ಶಾಲೆ ಆರಂಭದ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೊರೋನಾ ಹೆಚ್ಚಾದರೇ ಮುಂದಿನ ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದರು.
Key words: Starting -school – districts –low- Corona positivity- rates-Education Minister -BC Nagesh.