ಬೆಂಗಳೂರು,ಮೇ,10,2023(www.justkannada.in) ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದ್ದು, ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಿಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನಕ್ಕೆ ಅವಕಾಶವಿದೆ.
ಈ ನಡುವೆ ಬೆಳಗ್ಗೆ 7 ಗಂಟೆಯಿಂದ 11 ಗಂಟೆಯವರೆಗೆ ರಾಜ್ಯದಲ್ಲಿ ಶೇ.20.99ರಷ್ಟು ಮತದಾನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ ಬೆಂಗಳೂರು ಸೆಂಟ್ರಲ್ ಶೇ 19.30ರಷ್ಟು, ಬೆಂಗಳೂರು ಉತ್ತರ ಶೇ 17.50ರಷ್ಟು, ಬೆಂಗಳೂರು ದಕ್ಷಿಣ ಶೇ 19.18ರಷ್ಟು, ಬೆಂಗಳೂರು ನಗರದಲ್ಲಿ ಶೇ 17.72ರಷ್ಟು, ಬೆಳಗಾವಿ ಜಿಲ್ಲೆಯಲ್ಲಿ ಶೇ 20.76ರಷ್ಟು, ಬಳ್ಳಾರಿ ಜಿಲ್ಲೆಯಲ್ಲಿ ಶೇಕಡಾ 23.56ರಷ್ಟು, ಬೀದರ್ ಜಿಲ್ಲೆಯಲ್ಲಿ ಶೇಕಡಾ 20.54ರಷ್ಟು, ವಿಜಯಪುರ ಜಿಲ್ಲೆಯಲ್ಲಿ ಶೇಕಡಾ 20.66ರಷ್ಟು, ಚಾಮರಾಜನಗರ ಜಿಲ್ಲೆಯಲ್ಲಿ ಶೇಕಡಾ 16.77ರಷ್ಟು ಮತದಾನವಾಗಿದೆ.
ಮೈಸೂರು ಜಿಲ್ಲೆಯಲ್ಲಿ ಶೇ. 19.34ರಷ್ಟು, ರಾಯಚೂರು ಜಿಲ್ಲೆಯಲ್ಲಿ ಶೇಕಡಾ 22.48ರಷ್ಟು, ರಾಮನಗರ ಜಿಲ್ಲೆಯಲ್ಲಿ ಶೇ 25.21ರಷ್ಟು, ಶಿವಮೊಗ್ಗ ಜಿಲ್ಲೆಯಲ್ಲಿ ಶೇಕಡಾ 22.75ರಷ್ಟು, ಬಾಗಲಕೋಟೆ ಜಿಲ್ಲೆಯಲ್ಲಿ ಶೇ 23.44ರಷ್ಟು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 20.23ರಷ್ಟು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶೇ 21.46ರಷ್ಟು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ 22.29ರಷ್ಟು ಮತದಾನ ಬೆಳಿಗ್ಗೆ 11 ಗಂಟೆವರೆಗೆ ಆಗಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಶೇಕಡಾ 18.56ರಷ್ಟು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 28.46ರಷ್ಟು, ದಾವಣಗೆರೆ ಜಿಲ್ಲೆಯಲ್ಲಿ ಶೇಕಡಾ 21.32ರಷ್ಟು, ಧಾರವಾಡ ಜಿಲ್ಲೆಯಲ್ಲಿ ಶೇಕಡಾ 20.82ರಷ್ಟು, ಗದಗ ಜಿಲ್ಲೆಯಲ್ಲಿ ಶೇಕಡಾ 21.14ರಷ್ಟು, ಕಲಬುರಗಿ ಜಿಲ್ಲೆಯಲ್ಲಿ ಶೇಕಡಾ 17.89ರಷ್ಟು, ಹಾಸನ ಜಿಲ್ಲೆಯಲ್ಲಿ ಶೇಕಡಾ 22.18ರಷ್ಟು, ಹಾವೇರಿ ಜಿಲ್ಲೆಯಲ್ಲಿ ಶೇಕಡಾ 19.44ರಷ್ಟು, ಕೊಡಗು ಜಿಲ್ಲೆಯಲ್ಲಿ ಶೇಕಡಾ 26.49ರಷ್ಟು, ಕೋಲಾರ ಜಿಲ್ಲೆಯಲ್ಲಿ ಶೇಕಡಾ 19.87ರಷ್ಟು, ಕೊಪ್ಪಳ ಜಿಲ್ಲೆಯಲ್ಲಿ ಶೇಕಡಾ 21.46ರಷ್ಟು, ಮಂಡ್ಯ ಜಿಲ್ಲೆಯಲ್ಲಿ ಶೇಕಡಾ 19.56ರಷ್ಟು,
ತುಮಕೂರು ಜಿಲ್ಲೆಯಲ್ಲಿ ಶೇಕಡಾ 22.06ರಷ್ಟು, ಉಡುಪಿ ಜಿಲ್ಲೆಯಲ್ಲಿ ಶೇಕಡಾ 30.26ರಷ್ಟು, ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇಕಡಾ 25.46ರಷ್ಟು, ವಿಜಯನಗರ ಜಿಲ್ಲೆಯಲ್ಲಿ ಶೇಕಡಾ 21.07ರಷ್ಟು, ಯಾದಗಿರಿ ಜಿಲ್ಲೆಯಲ್ಲಿ ಶೇಕಡಾ 18.84ರಷ್ಟು ಮತದಾನವಾಗಿದೆ.
Key words: State -Assembly –Election-voting –done- till 11 am.